ಕೃಷಿ

ಕುರಿ ಮೇಯಿಸಲು ಹೋದ ಮಹಿಳೆಯನ್ನು ಬೇಟೆಯಾಡಿದ ಹುಲಿ!

Views: 95

ಮೈಸೂರು: ಕುರಿ ಮೇಯಿಸುತ್ತಿದ್ದ ಮಹಿಳೆ ಮೇಲೆ ಹುಲಿ ದಾಳಿ ನಡೆಸಿದ ಘಟನೆ  ಮೂರ್ಬಾಂದ್ ಬೆಟ್ಟದ ಸಮೀಪದಲ್ಲಿ ನಡೆದಿದೆ. ಹುಲಿ ದಾಳಿಯಿಂದ ಮಹಿಳೆ ಸಾವನ್ನಪ್ಪಿದ್ದು,ಕಾಲು ಪತ್ತೆಯಾಗಿದ್ದು ಮೃತದೇಹಕ್ಕಾಗಿ ಹುಡುಕಾಟ ನಡೆಯುತ್ತಿದೆ.

ಚಿಕ್ಕಿ (48) ಹುಲಿ ದಾಳಿಗೆ ಬಲಿಯಾದ ಮಹಿಳೆ. ಎಚ್.ಡಿ.ಕೋಟೆ ತಾಲ್ಲೂಕು ಎನ್.ಬೇಗೂರು ಸಮೀಪದ ಮಾಳದ ಹಾಡಿ ನಿವಾಸಿ.ಕುರಿ ಮೇಯಿಸುತ್ತಿದ್ದಾಗ ಹಠಾತ್ ಮಹಿಳೆ ಮೇಲೆ ಹುಲಿ ದಾಳಿ ಮಾಡಿದೆ.

ಘಟನಾ ಸ್ಥಳಕ್ಕೆ ಎನ್.ಬೇಗೂರು ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಹಿಳೆಯ ಮೃತದೇಹಕ್ಕಾಗಿ ಹುಡುಕಾಟ ನಡೆಸುತ್ತಿದ್ದು, ಇನ್ನು ಮೃತದೇಹ ಸಿಕ್ಕಿಲ್ಲ. ಮಹಿಳೆಯ ಕಾಲು ಮಾತ್ರ ಸಿಕ್ಕಿರುವ ಬಗ್ಗೆ ಮಾಹಿತಿ ಲಭಿಸಿದೆ. ಅಂತರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button