ಇತರೆ
ಬೈಂದೂರು :ಮೀನು ಹಿಡಿಯುವಾಗ ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

Views: 1
ಬೈಂದೂರು: ತಾಲೂಕಿನ ನಾಡ ಗ್ರಾಮದ ಬಡಾಕೆರೆ ಎಂಬಲ್ಲಿ ಸೌಪರ್ಣಿಕಾ ನದಿ ದಡದ ಮೇಲೆ ನಿಂತು ಬಲೆ ಬೀಸಿ ಮೀನು ಹಿಡಿಯುವ ಸಮಯದಲ್ಲಿ ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಮಂಜು (57) ಮೃತಪಟ್ಟ ವ್ಯಕ್ತಿ.ಮಂಜು (57) ಎಂದು ಗುರುತಿಸಲಾಗಿದೆ.
ಮೀನುಗಾರಿಕೆ ವೃತ್ತಿ ಮಾಡಿಕೊಂಡಿರುವ ಮಂಜು ಎಂದಿನಂತೆ ಸೋಮವಾರ ಮಧ್ಯಾಹ್ನ 3.30 ಸುಮಾರಿಗೆ ನದಿಯಲ್ಲಿ ಮೀನು ಹಿಡಿಯಲೆಂದು ಮನೆಯಿಂದ ತೆರಳಿದ್ದರು. ಸೌಪರ್ಣಿಕಾ ನದಿ ದಡದ ಮೇಲೆ ನಿಂತು ಬಲೆ ಬೀಸಿ ಮೀನುಗಾರಿಕೆ ಮಾಡುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದು ನಾಪತ್ತೆಯಾಗಿದ್ದರು.
ಸ್ಥಳೀಯರು ನದಿಯಲ್ಲಿ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ, ನೀರಿನ ಒಳ ಹರಿವು ಹೆಚ್ಚಾಗಿರುವುದರಿಂದ ಸಮಸ್ಯೆಯಾಗಿತ್ತು. ಮಂಗಳವಾರ ಸೌಪರ್ಣಿಕಾ ನದಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.






