ಇತರೆ

ಮಂಗಳೂರು:ಮಹಿಳೆಯ ಚಿಕಿತ್ಸೆಗೆ ನೇರವಾಗುವ ನೆಪದಲ್ಲಿ ಅತ್ಯಾಚಾರ, ನಗ್ನ ಪೋಟೋ ತೆಗೆದು ಬೆದರಿಕೆ: ಆರೋಪಿ ವಶಕ್ಕೆ 

Views: 120

ಮಂಗಳೂರು: ಮಹಿಳೆಗೆ  ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಸಹಕರಿಸುತ್ತೇನೆಂದು ಬಂದು ಲಾ‌ಡ್ಜ್‌ನಲ್ಲಿ, ಆಸ್ಪತ್ರೆಯಲ್ಲಿ ಅತ್ಯಾಚಾರಗೈದಿರುವ ಆರೋಪದ ಮೇಲೆ ಕೇರಳದ ವ್ಯಕ್ತಿಯನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ಹೊಸದುರ್ಗಾದ, ಪುಲ್ಲೂರು ಗ್ರಾಮದ ನಿವಾಸಿ ಸುಜಿತ್ ಎಂದು ಗುರುತಿಸಲಾಗಿದೆ.

ಕಾಸರಗೋಡು ಮೂಲದ ಸಂತ್ರಸ್ತೆ ಮಾ.13ರಂದು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ಚಿಕಿತ್ಸೆಗಾಗಿ ಸುಜಿತ್ ನೊಂದಿಗೆ ಬಂದಿದ್ದರು. ಆಸ್ಪತ್ರೆಯಲ್ಲಿ ರೂಮ್ ಸಂಖ್ಯೆ 48ರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮಾ.16 ರಂದು ರಾತ್ರಿ 8ಗಂಟೆಗೆ ಸುಜಿತ್ ಬಲವಂತವಾಗಿ ಮಹಿಳೆಯ ಬಟ್ಟೆಗಳನ್ನು ತೆಗೆದು ಅತ್ಯಾಚಾರ ಮಾಡಿ ಆಕೆಯ ನಗ್ನ ಫೋಟೋಗಳನ್ನು ಸೆರೆ ಹಿಡಿದಿದ್ದನು ಎಂದು ದೂರಿನಲ್ಲಿ ತಿಳಿಸಲಾಗಿದೆ. ಎ.4ರಂದು ಈ ನಗ್ನ ಫೋಟೋಗಳನ್ನು ಆಕೆಗೆ ತೋರಿಸಿದ ಸುಜಿತ್‌ ಮತ್ತೆ ಮಂಗಳೂರಿಗೆ ಬರುವಂತೆ ಒತ್ತಾಯವಾಗಿ ಕರೆದುಕೊಂಡು ಬಂದಿದ್ದಾನೆ. ಅದರಂತೆ ಎ.4 ರಿಂದ 8 ರವರೆಗೆ ನಗರದ ಮಹಾರಾಜಾ ರೆಸಿಡೆನ್ಸಿ ಹೋಟೆಲ್ ನಲ್ಲಿ ಇದ್ದುಕೊಂಡು ಹೆದರಿಸಿ ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ. ಈ ವೇಳೆಯೂ ನಗ್ನ ಫೋಟೋಗಳನ್ನು ತೆಗೆದುಕೊಂಡಿದ್ದಾನೆ ಎನ್ನಲಾಗಿದೆ.

ಅಲ್ಲದೆ ಎ. 8ರಿಂದ ಮೇ 10ರವರಿಗೆ ಮಂಗಳೂರಿನ ಫಾದರ್ ಮುಲ್ಲಾರ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ಅಲ್ಲಿಯೂ ಸುಜಿತ್ ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ. ಈ ವಿಚಾರ ಯಾರಲ್ಲಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದನು ಎಂದು ಆರೋಪಿಸಲಾಗಿದೆ. ಇದೀಗ ಸಂತ್ರಸ್ತೆ ಪೊಲೀಸ್‌ರಿಗೆ ದೂರು ನೀಡಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಿಕೊಂಡ ಕದ್ರಿ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Related Articles

Back to top button
error: Content is protected !!