ರಾಜಕೀಯ

ಕನ್ಯಾಕುಮಾರಿಯಲ್ಲಿ ಪ್ರಧಾನಿ ಮೋದಿ ಧ್ಯಾನಕ್ಕೆ ವಿಪಕ್ಷಗಳ ವಿರೋಧ :ಚುನಾವಣಾ ಆಯೋಗಕ್ಕೆ ದೂರು

Views: 86

ಕನ್ಯಾಕುಮಾರಿಯಲ್ಲಿ ಸ್ವಾಮಿ ವಿವೇಕಾನಂದರ ಗೌರವಾರ್ಥ ನಿರ್ಮಿಸಿರುವ ರಾಕ್ ಸ್ಮಾರಕದಲ್ಲಿ ಪ್ರಧಾನಿ ಮೋದಿ ಧ್ಯಾನ ಮಾಡಲಿದ್ದಾರೆ. ಇದಕ್ಕೆ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿ,ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಮೇ 30ರಂದು ಲೋಕಸಭಾ ಚುನಾವಣಾ ಪ್ರಚಾರ ಅಂತ್ಯಗೊಂಡ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಕನ್ಯಾಕುಮಾರಿಗೆ ಭೇಟಿ ರಾಕ್ ಸ್ಮಾರಕದಲ್ಲಿ ಧ್ಯಾನ ಮಾಡಲಿದ್ದಾರೆ.ಇದಕ್ಕೆ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದು, ಚುನಾವಣಾ ಕಾನೂನಿನ ಪ್ರಕಾರ ಚುನಾವಣಾ ಸಮಯದಲ್ಲಿ ಪ್ರಧಾನಿ ಧ್ಯಾನ ಮಾಡುವುದು ಉಲ್ಲಂಘನೆಯಾಗುವುದಿಲ್ಲ ಎಂದು ಹೇಳಿದೆ.

ವಾಸ್ತವವಾಗಿ, ಪ್ರಧಾನಿ ಮೋದಿ ಅವರ ಧ್ಯಾನ ಯಾತ್ರೆಯು ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಪ್ರಧಾನಿಯವರ ಧ್ಯಾನ ಯಾತ್ರೆಯನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ನೋಡಿಕೊಳ್ಳಬೇಕು ಎಂದು ಪಕ್ಷದ ಮುಖಂಡರು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

ಸಾರ್ವಜನಿಕ ಪ್ರಾತಿನಿಧ್ಯ ಕಾಯಿದೆ 1951ರ ಸೆಕ್ಷನ್ 126 ಅನ್ನು ಉಲ್ಲೇಖಿಸಿವೆ. ಇದರ ಪ್ರಕಾರ, ಮತದಾನಕ್ಕೆ 48 ಗಂಟೆಗಳ ಮೊದಲು ಚುನಾವಣಾ ಪ್ರಚಾರ ಮಾಡುವಂತಿಲ್ಲ. ಮತದಾನಕ್ಕೆ 48 ಗಂಟೆಗಳ ಮೊದಲು ಮೌನ ಅವಧಿ ಪ್ರಾರಂಭವಾಗುತ್ತದೆ. ಏಳನೇ ಹಂತದಲ್ಲಿ ಜೂನ್ 1ರಂದು ಪ್ರಧಾನಿ ಮೋದಿಯವರ ಕ್ಷೇತ್ರ ವಾರಣಾಸಿಯಲ್ಲಿ ಮತದಾನ ನಡೆಯಲಿದೆ. ವಿವಿಧ ಹಂತಗಳ ಚುನಾವಣೆಗಳಲ್ಲಿ ಚುನಾವಣಾ ಸಂಬಂಧಿತ ಕಾನೂನಿನ ನಿಬಂಧನೆಗಳು ಅನ್ವಯಿಸುವುದಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ.

ಪ್ರಧಾನಿ ಮೋದಿ ಚುನಾವಣೆಗೆ ಸಂಬಂಧಿಸಿದಂತೆ ಏನನ್ನೂ ಹೇಳದಿದ್ದರೆ, ಅವರ ಧ್ಯಾನ ಯಾತ್ರೆಯನ್ನು ನಿಲ್ಲಿಸಲಾಗುವುದಿಲ್ಲ. ಚುನಾವಣಾ ಆಯೋಗವು 2019 ರಲ್ಲೂ ಪ್ರಧಾನಿ ಮೋದಿಗೆ ಇದೇ ರೀತಿಯ ಅನುಮತಿಯನ್ನು ನೀಡಿತ್ತು.

Related Articles

Back to top button
error: Content is protected !!