ಸಿದ್ದರಾಮಯ್ಯ ಸರ್ಕಾರದ ಸಚಿವ ಬಿ.ನಾಗೇಂದ್ರ ತಲೆದಂಡಕ್ಕೆ ಕ್ಷಣಗಣನೆ?

Views: 67
ಬೆಂಗಳೂರು: ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಮುಖಭಂಗ ಆಗುವ ಸಾಧ್ಯತೆ ಹಿನ್ನಲೆಯಲ್ಲಿ ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ ನಾಗೇಂದ್ರ ಅವರು ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ.
ಡೆತ್ನೋಟ್ ಬರೆದಿಟ್ಟು ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದರು. ರಾಜ್ಯದ ಹಲವೆಡೆ ಪ್ರತಿಭಟನೆಗಳು ನಡೆದಿದ್ದು, ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಡ ಹಾಕಲಾಗಿತ್ತು.
ವಾಲ್ಮೀಕಿ ನಿಗಮದ ಹಗರಣದ ತನಿಖೆ ಪೂರ್ಣ ಆಗುವವರೆಗೂ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಪಡೆಯಲು ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಸಚಿವ ಬಿ. ನಾಗೇಂದ್ರ ಅವರು ಇಂದು ರಾತ್ರಿ ವೇಳೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಎಸ್ಟಿ ನಿಗಮದ ಅಧಿಕಾರಿಯ ಆತ್ಮಹತ್ಯೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಮುಖಭಂಗ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.






