ಸಾಂಸ್ಕೃತಿಕ
ಯಕ್ಷರಂಗದ ಹೆಸರಾಂತ ಹಾಸ್ಯ ಕಲಾವಿದ ದಿನೇಶ್ ಶೆಟ್ಟಿಗಾರ್ ಕೋಡಪದವು ಅವರಿಗೆ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ

Views: 229
ಉಡುಪಿ:ತೆಂಕು ತಿಟ್ಟಿನ ಹೆಸರಾಂತ ಹಾಸ್ಯ ಕಲಾವಿದ ದಿನೇಶ್ ಶೆಟ್ಟಿಗಾರ್ ಕೋಡಪದವು ಅವರಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಹಲವಾರು ವರ್ಷಗಳಿಂದ ತೆಂಕುತಿಟ್ಟಿನ ಯಕ್ಷರಂಗದಲ್ಲಿ ಹಾಸ್ಯ ಕಲಾವಿದರಾಗಿ ಮಿಂಚುತ್ತಿರುವ ದಿನೇಶ್ ಶೆಟ್ಟಿಗಾರ್ ಕೊಡಪದವು ಇವರ ಯಕ್ಷಕಲಾ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಜೂನ್ 6 ರಂದು ಸಂಜೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ.







