ಕರಾವಳಿ

ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಪಲ್ಟಿ:ವಾಹನ ಸಂಚಾರ ಅಸ್ತವ್ಯಸ್ತ

Views: 93

ಮಂಗಳೂರು:ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಬಂಟ್ವಾಳದ ರಾಷ್ಟ್ರೀಯ ಹೆದ್ದಾರಿ 75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ನಡೆದಿದೆ.

ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಏಕಾಏಕಿ ಪಲ್ಟಿಯಾಗಿದೆ. ಸದ್ಯ ಯಾವುದೇ ಲಿಕೇಜ್ ಇಲ್ಲದೇ ಇರುವುದರಿಂದ ಹೆಚ್ಚಿನ ಹಾನಿ ಉಂಟಾಗಿಲ್ಲ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ವಿಷಯ ತಿಳಿದ ಕೂಡಲೇ ಬಂಟ್ವಾಳ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಸ್ಥಳೀಯರಿಂದ ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಯಿತು.

Related Articles

Back to top button
error: Content is protected !!