ಇತರೆ
ಆಟವಾಡುತ್ತಿದ್ದ ಮೂವರು ಮಕ್ಕಳು ಕೆರೆಯಲ್ಲಿ ಮುಳುಗಿ ಸಾವು

Views: 84
ಳಹಾಸನ: ಆಟವಾಡುತ್ತಿದ್ದ ಮೂವರು ಮಕ್ಕಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೇಲೂರು ತಾಲ್ಲೂಕಿನ ನರಸೀಪುರ ಗ್ರಾಮದಲ್ಲಿ ನಡೆದಿದೆ. ದೀಕ್ಷಿತ್ (10), ನಿತ್ಯಶ್ರೀ (12), ಕುಸುಮ (6) ಮೃತಪಟ್ಟವರು.
ಈ ಮೂರು ಮಕ್ಕಳು ಜಾನುವಾರುಗಳನ್ನು ಕೆರೆಯ ಬಳಿ ಕಟ್ಟಿ ಆಟವಾಡಲು ನೀರಿನಲ್ಲಿ ಇಳಿದಿದ್ದರು. ಆಟವಾಡುತ್ತಿದ್ದಾಗ ಕೆರೆಯಲ್ಲಿ ಮೂವರು ಮುಳುಗಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಹಳೇಬೀಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






