ಬ್ರಹ್ಮಾವರ:ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ವಾಸ್ತು ತಜ್ಞರಿಗೆ ಜಾಮೀನು

Views: 53
ಉಡುಪಿ: ಬ್ರಹ್ಮಾವರ ಪರಿಸರದ ವಾಸ್ತುತಜ್ಞರೊಬ್ಬರ ಮೇಲೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದ್ದು, ಆ ಸಂಬಂಧಿತ ಆರೋಪಿಯನ್ನು ಬ್ರಹ್ಮಾವರ ಪೊಲೀಸರು ದಸ್ತಗಿರಿ ಮಾಡಿ, ನ್ಯಾಯಾಲಯದ ಆದೇಶದಂತೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.
ಆರೋಪಿಯ ಪರವಾಗಿ ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದು, ವಿಚಾರಣೆಯ ಅನಂತರ ಆರೋಪಿಗೆ ನ್ಯಾಯಾಧೀಶರಾದ ದಿನೇಶ್ ಹೆಗ್ಡೆ ಅವರು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಆರೋಪಿಯ ಪರವಾಗಿ ಉಡುಪಿಯ ನ್ಯಾಯವಾದಿ ಚೇರ್ಕಾಡಿ ಅಖೀಲ್ ಬಿ. ಹೆಗ್ಡೆ ವಾದಿಸಿದ್ದರು.
ಏನಿದು ಪ್ರಕರಣ ? :ಬ್ರಹ್ಮಾವರ ಸಮೀಪದ ಚಾಂತಾರು ನಿವಾಸಿ ಆರೋಪಿ ಅನಂತ ನಾಯ್ಕ ಬ್ರಹ್ಮಾವರ ಬಸ್ ನಿಲ್ದಾಣ ಸಮೀಪದ ಲಾಡ್ಜ್ ಒಂದರ ರೂಮಿನಲ್ಲಿ ವಾಸ್ತುತಜ್ಞ, ಜಲತಜ್ಞ, ಯೋಗ ಪಂಡಿತ, ಆಧ್ಯಾತ್ಮಿಕ ಪಂಡಿತ, ಎಂಬುದಾಗಿ ಹೇಳಿಕೊಂಡು ವ್ಯವಹಾರ ನಡೆಸುತ್ತಿದ್ದ ಇವರು 18ರ ಹರೆಯದ ಬಾಲಕ ತನ್ನ ತಂದೆಯೊಂದಿಗೆ ಈತನ ಬಳಿ ವಾಸ್ತು ಕೇಳಲು ಲಾಡ್ಜ್ ನಲ್ಲಿ ತಂಗಿರುವ ವಾಸ್ತು ತಜ್ಞ ಆನಂತ್ ನಾಯ್ಕ ರೂಮಿಗೆ ರಾತ್ರಿ 9:00 ಸುಮಾರಿಗೆ ಹೋಗಿದ್ದರು. ಈ ಸಂದರ್ಭ ತಂದೆಯನ್ನು ಹೊರಗೆ ಕಳುಹಿಸಿದ ಈತ ಯುವಕನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರು ನೀಡಲಾಗಿದೆ..ದೂರಿನ ಆಧಾರದ ಮೇಲೆ ಬೃಹ್ಮಾವರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಅಸ್ವಭಾವಿಕ ಲೈಂಗಿಕ ದೌರ್ಜನ್ಯದ ಕಿರುಕುಳ ಪ್ರಕರಣ ದಾಖಲಾಗಿತ್ತು






