ಸಾಂಸ್ಕೃತಿಕ
ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ಪ್ರಕರಣ: ತೆಲುಗು ನಟಿ ಹೇಮಾ ಬಂಧನ

Views: 41
ಬೆಂಗಳೂರು: ಬೆಂಗಳೂರಿನಲ್ಲಿ ನಡೆದಿದ್ದ ರೇವ್ ಪಾರ್ಟಿ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟಿ ಹೇಮಾರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಹೇಮಾಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಇಂದು ಬುರ್ಕಾ ಧರಿಸಿದ್ದ ಬಂಧಿದ್ದ ಹೇಮಾ ಸಿಸಿಬಿ ಅಧಿಕಾರಿಗಳ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದ ಹಿನ್ನಲೆಯಲ್ಲಿ ನಟಿಯನ್ನು ಬಂಧಿಸಿದ್ದಾರೆ.
ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದ್ದ ಹಿನ್ನೆಲೆಯಲ್ಲಿ ನಟಿ ಹೇಮಾ ಸೇರಿದಂತೆ ಎಂಟು ಮಂದಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಆದರೆ ಹೇಮಾ ವಿಚಾರಣೆಗೆ ಹಾಜರಾಗಲು ಏಳು ದಿನಗಳ ಕಾಲಾವಕಾಶ ಕೋರಿದ್ದರು. ಅದರಂತೆ ಇಂದು ನಟಿ ಸಿಸಿಬಿ ಪೊಲೀಸರ ಮುಂದೆ ಹಾಜರಾಗಿದ್ದರು.
ಇತ್ತೀಚೆಗಷ್ಟೇ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಬಳಿಯ ಜಿಎಂ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಯ ಮೇಲೆ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳ ದಾಳಿ ನಡೆಸಿ, ಸ್ಥಳದಿಂದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿತ್ತು.






