ರಾಜಕೀಯ

ನೈರುತ್ಯ ಪದವೀಧರರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಡಾ.ಧನಂಜಯ್ ಸರ್ಜಿಗೆ ಭರ್ಜರಿ ಗೆಲುವು, ರಘುಪತಿ ಭಟ್ 3ನೇ ಸ್ಥಾನಕ್ಕೆ 

Views: 131

ಉಡುಪಿ: ವಿಧಾನಪರಿಷತ್ ಚುನಾವಣೆಯ ನೈರುತ್ಯ ಪದವೀಧರರ ಕ್ಷೇತ್ರದ ಮತ ಏಣಿಕೆ ಮುಕ್ತಾಯವಾಗಿದ್ದು, ಬಿಜೆಪಿ ಅಭ್ಯರ್ಥಿ ಡಾ.ಧನಂಜಯ್ ಸರ್ಜಿ ಅವರು ಭರ್ಜರಿ ಜಯಭೇರಿ ಬಾರಿಸಿದ್ದಾರೆ.

37,627 ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಜಯ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ಗೆ 13,516 ಮತ ಹಾಗೂ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಕೇವಲ 7,039 ಮತಗಳನ್ನು ಪಡೆದು ಮೂರನೇ ಸ್ಥಾನ ಗಳಿಸಿದ್ದಾರೆ.

30692+1 ಕೋಟಾ ನಿಗದಿಯಾಗಿದ್ದು, 5115 ಕುಲಗೆಟ್ಟ ಮತಗಳು ಎಂದು ಪರಿಗಣಿಸಲಾಗಿದೆ. ನಿಗದಿತ ಕೋಟಾಗಿಂತ 6,935 ಹೆಚ್ಚುವರಿ ಮತಗಳು ಡಾ.ಧನಂಜಯ್ ಸರ್ಜಿ ಅವರಿಗೆ ಲಭಿಸಿವೆ. ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಅವರು ಗೆಲುವು ಸಾಧಿಸಿದ್ದಾರೆ. ಇದರಿಂದಾಗಿ ಕಾಂಗ್ರೆಸ್ಗೆ ಮತ್ತೊಮ್ಮೆ ತೀವ್ರ ಮುಖಭಂಗ ಉಂಟಾಗಿದೆ. ಈಗಾಗಲೇ ಬಿಜೆಪಿ ಮಿತ್ರ ಪಕ್ಷ ಜೆಡಿಎಸ್ ತನ್ನ ಪಾಲಿನ ಎರಡೂ ಕ್ಷೇತ್ರಗಳನ್ನು ಗೆದ್ದುಕೊಂಡಿದೆ.

 

Related Articles

Back to top button
error: Content is protected !!