ಕರಾವಳಿ
ಕಾಪು ಬೀಚ್ ಬಳಿ ಬೈಕ್, ಮೊಬೈಲ್ ಪರ್ಸ್ ಇಟ್ಟು ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

Views: 135
ಉಡುಪಿ : ಕಾಪು ಬೀಚ್ ಬಳಿ ಬೈಕ್, ಮೊಬೈಲ್, ಪರ್ಸ್ ಇಟ್ಟು ಯುವಕ ನಾಪತ್ತೆಯಾದ ಯುವಕನ ಮೃತದೇಹ ಪಡುಕೆರೆ ಬಳಿಯ ಸಮುದ್ರದಲ್ಲಿ ಶುಕ್ರವಾರ ಸಂಜೆ ವೇಳೆ ಪತ್ತೆಯಾಗಿದೆ.
ಗುರುವಾರ ಸಂಜೆಯಿಂದ ನಾಪತ್ತೆಯಾಗಿದ್ದ ಕರಣ್ ಸಾಲ್ಯಾನ್ ರವರ ಬೈಕ್, ಮೊಬೈಲ್ ಹಾಗೂ ಪರ್ಸ್ ಕಾಪು ಲೈಟ್ ಹೌಸ್ ಬಳಿಯಲ್ಲಿ ಪತ್ತೆಯಾಗಿತ್ತು.
ಈ ಬಗ್ಗೆ ತಂದೆ ಕಾಪು ಠಾಣೆಗೆ ದೂರು ನೀಡಿದ್ದು, ಸ್ಥಳೀಯರು, ಈಜುಗಾರರು ಶುಕ್ರವಾರ ಬೆಳಗಿನಿಂದಲೇ ಸಮುದ್ರದಲ್ಲಿ ಹುಡುಕಾಟ ನಡೆಸಿದ್ದು, ಸಂಜೆಯ ವೇಳೆ ಮಲ್ಪೆ ಬಳಿಯ ಪಡುಕೆರೆ ಕಡೆಕಾರು ಸಮುದ್ರದಲ್ಲಿ ಮೃತದೇಹ ತೇಲುತ್ತಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಸ್ಥಳೀಯರು ಮೃತದೇಹವನ್ನು ಸಮುದ್ರದಿಂದ ಹೊರತೆಗೆದಿದ್ದಾರೆ. ಕಾಪುವಿನ ಸಮಾಜಸೇವಕ ಸೂರಿ ಶೆಟ್ಟಿಯವರು ಮೃತದೇಹವನ್ನು ಉಡುಪಿ ಅಜ್ಜರ ಕಾಡು ಆಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸಿದರು.






