ಕುಂದಾಪುರ: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯ ಬಂಧನ

Views: 294
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದ ಅಮಾಸೆಬೈಲು ಸಮೀಪ ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಶ್ರೇಯಸ್ ನಾಯ್ಕ (25) ಪೊಲೀಸರು ಬಂಧಿಸಿದ್ದಾರೆ
ಇಲ್ಲಿನ ಅಮಾಸೆಬೈಲು ಶ್ರೇಯಸ್ ನಾಯ್ಕ (25) ಎಂಬಾತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿದ್ದ.ಆರೋಪಿಯು ಹಲವಾರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕಳೆದ ಒಂದು ವರ್ಷದಿಂದ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ.
ಆರೋಪಿ ವಿರುದ್ಧ ಮೇ 18ರಂದು ಪೋಕ್ಸೊ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ
ಆರೋಪಿ ಲೈಂಗಿಕ ದೌರ್ಜನ್ಯ ಎಸಗುವ ದೃಶ್ಯಗಳನ್ನು ಸೆರೆ ಹಿಡಿದು ತನ್ನ ಖಾಸಗಿ ಲ್ಯಾಪ್ಟಾಪ್ನಲ್ಲಿ ಇರಿಸಿಕೊಳ್ಳುತ್ತಿದ್ದ. ಈತ ಶಾಲೆ, ಕಾಲೇಜು ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಈತ ವಿದ್ಯಾರ್ಥಿನಿಯೊಬ್ಬಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆ. ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಅತ್ಯಾಚಾರದ ದೃಶ್ಯ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ.






