ಕೇಂದ್ರ ಸಚಿವ ಸ್ಥಾನಕ್ಕೆ ವಿ.ಸೋಮಣ್ಣ ಅವರಿಗೆ ದಿಢೀರ್ ಆಹ್ವಾನ

Views: 94
ನವದೆಹಲಿ:ತುಮಕೂರು ಲೋಕಸಭಾ ಕ್ಷೇತ್ರದಿಂದ ಸಂಸತ್‌ಗೆ ಆಯ್ಕೆಯಾದ ವಿ.ಸೋಮಣ್ಣ ಅವರಿಗೆ ಅದೃಷ್ಟ ಖುಲಾಯಿಸಿದೆ.ಕೇಂದ್ರ ಸಚಿವ ಸ್ಥಾನಕ್ಕೆ ವಿ.ಸೋಮಣ್ಣ ಅವರಿಗೆ ದಿಢೀರ್ ಆಹ್ವಾನ ಬಂದಿದೆ. ಅಚ್ಚರಿ ಎಂಬಂತೆ ವಿ.ಸೋಮಣ್ಣ ಅವರು ಕೇಂದ್ರ ಸಚಿವರಾಗುವ ಮೂಲಕ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಮೊದಲ ಬಾರಿಗೆ ಕೇಂದ್ರ ಸಚಿವ ಸ್ಥಾನ ಒಲಿದು ಬಂದಿದೆ.
ಕೇಂದ್ರ ಸಚಿವರಾಗುವ ನಾಯಕರಿಗೆ ಪ್ರಧಾನಿ ನಿವಾಸದಲ್ಲಿ ಇಂದು ಸಭೆ ನಡೆಸಲಾಯಿತು. ಈ ಸಭೆಯಲ್ಲಿ ತುಮಕೂರು ಸಂಸದ ವಿ. ಸೋಮಣ್ಣ ಅವರು ಭಾಗಿಯಾಗಿದ್ದರು. ಮೋದಿ ಮನೆಯ ಚಹಾಕೂಟದಲ್ಲಿ ಭಾಗಿಯಾಗಿದ್ದ ಸೋಮಣ್ಣ ಅವರಿಗೆ ಕೇಂದ್ರ ಸಚಿವ ಸ್ಥಾನ ಖಾತ್ರಿಯಾಗಿದೆ
ಕರ್ನಾಟಕದಿಂದ ಈ ಬಾರಿ ಲಿಂಗಾಯತ ಕೋಟಾದಲ್ಲಿ ಘಟಾನುಘಟಿಗಳ ಮಧ್ಯೆ ಸಂಸದ ವಿ. ಸೋಮಣ್ಣ ಅವರು ಕೇಂದ್ರ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಮೋದಿ ಸಂಪುಟದಲ್ಲಿ ಸೋಮಣ್ಣ ಅವರಿಗೆ ಅದೃಷ್ಟ ಖುಲಾಯಿಸಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಸವರಾಜ್ ಬೊಮ್ಮಾಯಿಗೆ ಕೇಂದ್ರ ಸಚಿವ ಸ್ಥಾನ ಕೈ ತಪ್ಪಿದೆ.
ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಮೊದಲ ಬಾರಿಗೆ ಕೇಂದ್ರ ಸಚಿವ ಸ್ಥಾನ ಒಲಿದು ಬಂದಿದೆ. ಈ ಹಿಂದೆ ಬಿಜೆಪಿಯ ಎಸ್. ಮಲ್ಲಿಕಾರ್ಜುನಯ್ಯ ಅವರು ಲೋಕಸಭೆಯ ಡೆಪ್ಯುಟಿ ಸ್ಪೀಕರ್ ಆಗಿದ್ದರು. ಅದನ್ನು ಹೊರತುಪಡಿಸಿ ತುಮಕೂರು ಲೋಕಸಭಾ ಸದಸ್ಯರಿಗೆ ರಾಷ್ಟ್ರಮಟ್ಟದಲ್ಲಿ ಇದುವರೆಗೂ ಸಚಿವ ಸ್ಥಾನ ಸಿಕ್ಕಿಲ್ಲ.






