ರಾಘವೇಂದ್ರ ರಾಜ್‌ಕುಮಾರ್ ಅವರ ಕಿರಿಯ ಪುತ್ರ ಯುವ ರಾಜ್‌ಕುಮಾರ್ – ಶ್ರೀದೇವಿ ವಿಚ್ಚೇದನಕ್ಕೆ ಅರ್ಜಿ!

Views: 105
ಬೆಂಗಳೂರು: ಕನ್ನಡ ಚಿತ್ರರಂಗದ ನಟ ಯುವ ರಾಜ್‌ಕುಮಾರ್ ಮತ್ತು ಶ್ರೀದೇವಿ ಬೈರಪ್ಪ ಸಂಸಾರದಲ್ಲಿ ಬಿರುಗಾಳಿ ಎದ್ದಿದೆ. ಇಬ್ಬರೂ ಬೇರೆ ಬೇರೆಯಾಗಿದ್ದು ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಯುವ ರಾಜ್ ಪತ್ನಿ ಶ್ರೀದೇವಿ ಭೈರಪ್ಪಗೆ ಕೋರ್ಟಿನಿಂದ ನೋಟಿಸ್ ಜಾರಿಯಾಗಿದೆ. ಜೂನ್ 6 ರಂದು ಯುವರಾಜ್ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಮುಂದಿನ ತಿಂಗಳು ಜುಲೈ 4ಕ್ಕೆ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ.
ದೊಡ್ಮನೆ ಕುಟುಂಬದ ಕುಡಿ, ರಾಘವೇಂದ್ರ ರಾಜ್‌ಕುಮಾರ್ ಅವರ ಕಿರಿಯ ಪುತ್ರನಾಗಿರುವ ಯುವ ರಾಜ್‌ಕುಮಾರ್ ಮತ್ತು ಮೈಸೂರು ಮೂಲದ ಶ್ರೀದೇವಿ ಭೈರಪ್ಪ ಉನ್ನತ ವ್ಯಾಸಂಗ ಮಾಡಿದ್ದಾರೆ. ಇವರಿಬ್ಬರೂ ಮೊದಲು ಸ್ನೇಹಿತರಾಗಿದ್ದರು. ಸ್ನೇಹ ಪ್ರೀತಿಗೆ ತಿರುಗಿತು. 7 ವರ್ಷಗಳ ಕಾಲ ಪ್ರೀತಿಸಿ, ಮನೆಯವರನ್ನು ಒಪ್ಪಿಸಿ 2019, ಮೇ 26ರಂದು ಅದ್ಧೂರಿಯಾಗಿ ವಿವಾಹವಾಗಿದ್ದರು.
ಈಗ ಇಬ್ಬರ ನಡುವೆ ಬಿರುಕು ಮೂಡಿದ್ದು, ಅಧಿಕೃತವಾಗಿ ವಿಚ್ಚೇದನ ಪಡೆಯಲು ದಂಪತಿ ನಿರ್ಧಾರ ಮಾಡಿದ್ದಾರೆ. ಎಂ ಸಿ ಆಕ್ಟ್ ಸೆಕ್ಷನ್ (13 (1) (ia) ಅಡಿಯಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಪತ್ನಿ ವಿರುದ್ಧ ಕ್ರೌರ್ಯದ ಆರೋಪ ಮಾಡಿ ಯುವ ರಾಜ್‌ಕುಮಾರ್ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಯಾವ ಕಾರಣಕ್ಕೆ ಇವರಿಬ್ಬರ ಮಧ್ಯೆ ಬಿರುಕಾಗಿದೆ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ.
ಯುವ ರಾಜ್‌ಕುಮಾರ್ ಕಡೆಯಿಂದ ವಿಚ್ಚೇದನಕ್ಕೆ ಪಿಟಿಷನ್ ಅರ್ಜಿ ಹಾಕಿದ್ದು, ಶ್ರೀದೇವಿ ಭೈರಪ್ಪ ಅವರ ನಡೆ ಏನು? ಎಂಬುದು ಇನ್ನೂ ತಿಳಿದುಬಂದಿಲ್ಲ. ಯುವ ಸಿನಿಮಾದ ಮುಹೂರ್ತದಲ್ಲಿ ಇಬ್ಬರೂ ಕೂಡ ಒಟ್ಟಿಗೆ ಕಾಣಿಸಿಕೊಂಡಿದ್ದರು. ಯುವ ರಿಲೀಸ್ ಸಮಯದಲ್ಲಿ ಶ್ರೀದೇವಿ ಒಟ್ಟಿಗೆ ಇರಲಿಲ್ಲ.






