ಇತರೆಸಾಂಸ್ಕೃತಿಕ

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಅರೆಸ್ಟ್ ಬೆನ್ನಲ್ಲೇ ಪವಿತ್ರಾ ಗೌಡ ಬಂಧನ

Views: 267

ಬೆಂಗಳೂರು: ಕೊಲೆ ಪ್ರಕರಣವೊಂದರ ಸಂಬಂಧ  ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಬಂಧನದ ಬೆನ್ನಲ್ಲೇ ಇದೀಗ ನಟಿ ಪವಿತ್ರಾ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಒಳಸಂಚು ಆರೋಪದ ಮೇಲೆ ನಟಿಯನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಪ್ರಕರಣ ಸಂಬಂಧ ಪವಿತ್ರಾ ಗೌಡ ಹಾಗೂ ದರ್ಶನ್‌ ಇಬ್ಬರನ್ನೂ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಪವಿತ್ರಾ ಗೌಡ ಸೋಶಿಯಲ್ ಮೀಡಿಯಾ ಪೋಸ್ಟ್ ಗೆ ರೇಣುಕಾಸ್ವಾಮಿ ಕೆಟ್ಟದಾಗಿ ಕಾಮೆಂಟ್‌ ಮಾಡಿದ್ದ ಎಂದು ಹೇಳಲಾಗಿತ್ತಿದ್ದು, ಇದೇ ಕಾರಣಕ್ಕೆ ದರ್ಶನ್‌ ಬಾಡಿಗಾರ್ಡ್‌ಗಳು ಬೆದರಿಸಲು ಹೋಗಿ ಕೊಲೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಇಬ್ಬರನ್ನು ಬಂಧಿಸಿದ್ದಾರೆ.

Related Articles

Back to top button
error: Content is protected !!