ಜನಮನ

ವಿದ್ಯುತ್ ತಂತಿ ತುಳಿದು ಮೈಸೂರು ದಸರಾ ಆನೆ ಅಶ್ವತ್ಥಾಮ ಸಾವು

Views: 96

ಮೈಸೂರು, ಮೈಸೂರು ದಸರಾ ಆನೆ ವಿದ್ಯುತ್ ತಂತಿ ತುಳಿದು  ಅಶ್ವತ್ಥಾಮ ದುರಂತ ಅಂತ್ಯಕಂಡಿದೆ.

ನಾಗರಹೊಳೆ ಅರಣ್ಯ ಪ್ರದೇಶದ ಗಡಿಯಲ್ಲಿ ಹಾಕಲಾಗಿರುವ ಸೋಲಾರ್ ತಂತಿ ಬೇಲಿಯಲ್ಲಿ ವಿದ್ಯುತ್ ಪ್ರವಹಿಸಿ ಸಾವನಪ್ಪಿದ ಅಶ್ವತ್ಥಾಮ ಸಾವನ್ನಪ್ಪಿದ್ದಾನೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

ಹುಣಸೂರು ಪಿರಿಯಾಪಟ್ಟಣ ಗಡಿ ಭಾಗದಲ್ಲಿರುವ ಆನೆ ಶಿಬಿರದಲ್ಲಿದ್ದ 38 ವರ್ಷದ ಅಶ್ವತ್ಥಾಮ ಆನೆ, ಎರಡು ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗಿಯಾಗಿತ್ತು. 2017ರಲ್ಲಿ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನಲ್ಲಿ ಅಶ್ವತ್ಥಾಮ ಆನೆಯನ್ನು ಸೆರೆ ಹಿಡಿಯಲಾಗಿತ್ತು. ಬಳಿಕ ಅದನ್ನು ಪಳಗಿಸಿ ಮೈಸೂರು ದಸರಾ ಮಹೋತ್ಸವಕ್ಕೆ ಕರೆತರಲಾಗಿತ್ತು.

 

Related Articles

Back to top button
error: Content is protected !!