ರಾಜಕೀಯ

ಪೋಕ್ಸೋ ಪ್ರಕರಣ ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪ ಅವರಿಗೆ ನೋಟಿಸ್ ಜಾರಿ!  

Views: 49

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಇಂದು ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ಸದ್ಯ ದೆಹಲಿಯಲ್ಲಿರುವುದರಿಂದ ಜೂನ್ 17ರಂದು ವಿಚಾರಣೆಗೆ ಹಾಜರಾಗುವುದಾಗಿ ವಕೀಲರ ಮೂಲಕ ಬಿ.ಎಸ್. ಯಡಿಯೂರಪ್ಪ ಉತ್ತರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಫೆಬ್ರವರಿ ತಿಂಗಳಿನಲ್ಲಿ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ಬಾಲಕಿಯ ತಾಯಿ ಮಾರ್ಚ್ 14ರಂದು ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಯಡಿಯೂರಪ್ಪ ಅವರ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣದ ತನಿಖೆ ಸಿಐಡಿಗೆ ವರ್ಗಾಯಿಸಲಾಗಿತ್ತು. ಇತ್ತೀಚೆಗಷ್ಟೇ ದೂರು ದಾಖಲಿಸಿದ್ದ ಮಹಿಳೆ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.

ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಯಡಿಯೂರಪ್ಪ ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ದೂರಿನಲ್ಲಿ ಅಪರಾಧದ ಅಂಶಗಳಿಲ್ಲ. ಆದ್ದರಿಂದ ಪ್ರಕರಣ ರದ್ದುಪಡಿಸಬೇಕು” ಎಂದು ಅರ್ಜಿಯಲ್ಲಿ ಬಿಎಸ್ವೈ ಮನವಿ ಮಾಡಿದ್ದಾರೆ.

Related Articles

Back to top button
error: Content is protected !!