ಇತರೆ

ಕಾಂಚನ ಜುಂಗಾ ರೈಲಿಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು: ಐವರು ಸಾವು 

Views: 97

ಡಾರ್ಜಿಲಿಂಗ್: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ಅಸ್ಸಾಂನ ಸಿಲ್ಚಾರ್ನಿಂದ ಕಲ್ಕತ್ತಾಗೆ ತೆರಳುತ್ತಿದ್ದ ಕಾಂಚನಜುಂಗಾ ರೈಲಿಗೆ  ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ. ಹಾಗೂ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ನ್ಯೂ ಜಲ್ಪೈಗುರಿಗೆ ಸಮೀಪವಿರುವ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು, ಪ್ಯಾಸೆಂಜರ್ ರೈಲಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಪ್ಯಾಸೆಂಜರ್ ರೈಲಿನ ಎರಡು ಬೋಗಿಗಳು ಹಳಿ ತಪ್ಪಿವೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, “ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿದೇವ ಪ್ರದೇಶದಲ್ಲಿ ನಡೆದ ಭೀಕರ ರೈಲು ಅಪಘಾತದ ಬಗ್ಗೆ ತಿಳಿದು ಆಶ್ಚರ್ಯವಾಯಿತು. ವಿವರಗಳಿಗಾಗಿ ಕಾಯುತ್ತಿರುವಾಗ ಕಾಂಚನಜುಂಗಾ ರೈಲಿಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದಿರುವುದಾಗಿ ತಿಳಿಯಿತು. ಭೀಕರ ರೈಲು ಅಪಘಾತದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ, ಸ್ಥಳಕ್ಕೆ ಡಿಎಂ, ಎಸ್ಪಿ, ವೈದ್ಯರು ಹಾಗೂ ಆಂಬ್ಯುಲೆನ್ಸ್ ಮತ್ತು ವಿಪತ್ತು ನಿರ್ವಹಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

Related Articles

Back to top button
error: Content is protected !!