ರೇಣುಕಾಸ್ವಾಮಿ ಕೊಲೆ ಪ್ರಕರಣ ಪಾರದರ್ಶಕ ವಿಚಾರಣೆಯಾಗಬೇಕು :ರಿಯಲ್ ಸ್ಟಾರ್ ಉಪೇಂದ್ರ

Views: 100
ಬೆಂಗಳೂರು: ನಟ ಕಿಚ್ಚ ಸುದೀಪ ಅವರು ರೇಣುಕಾಸ್ವಾಮಿಗೆ ನ್ಯಾಯ ಸಿಗಬೇಕೆಂದು ಹೇಳಿದ ಬೆನ್ನಲ್ಲೇ ಇದೀಗ ಉಪೇಂದ್ರ ಕೂಡ ಇದಕ್ಕೆ ದನಿಗೂಡಿಸಿದ್ದಾರೆ.ತಮ್ಮ ಸಾಮಾಜಿಕ ಜಾಲತಾಣ ಇನ್‌ಸ್ಟ್ರಾಗ್ರಾಂನಲ್ಲಿ ಸುದೀರ್ಘವಾದ ಪೋಸ್ಟ್ ಮಾಡಿರುವ ಉಪೇಂದ್ರ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪಾರದರ್ಶಕ ವಿಚಾರಣೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ. ಈ ಹೈಪ್ರೊಫೈಲ್ ಕೇಸ್‌ನ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ ಎಂದಿದ್ದಾರೆ.
ರೇಣುಕಾಸ್ವಾಮಿ ಕುಟುಂಬದಲ್ಲಿ ಜನರಲ್ಲಿ, ಟಿವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ, ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ.
ಏಕೆಂದರೆ ಯಾವುದೇ ಕೇಸ್ ಆದರೂ ಆ ಕೇಸ್‌ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂಧಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು ಎಂದು ಹೇಳಿದ್ದಾರೆ.
ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್‌ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು. ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು, ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ ಎಂದರು






