ಜನಮನ

ವಾಹನ ಸವಾರರಿಗೆ ಗುಡ್‌ ನ್ಯೂಸ್! HSRP ನಂಬರ್‌ ಪ್ಲೇಟ್‌ ಅಳವಡಿಕೆ ಜುಲೈ 4ರವರೆಗೆ ವಿಸ್ತರಣೆ ಮಾಡಿದ ಗಡುವು..ಮತ್ತೆ ವಿಸ್ತರಣೆ

Views: 66

ಬೆಂಗಳೂರು: 2019ಕ್ಕಿಂತ ಹಿಂದೆ ಮಾರುಕಟ್ಟೆಗೆ ಇಳಿದ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಸಂಖ್ಯೆ ಫಲಕ HSRP ಕಡ್ಡಾಯವಾಗಿ ಅಳವಡಿಸಬೇಕೆಂಬ ಗಡುವನ್ನು ಸೆಪ್ಟೆಂಬರ್‌ 15ರವರೆಗೆ ವಿಸ್ತರಣೆ ಮಾಡಲಾಗಿದೆ. ಜುಲೈ 4ರವರೆಗೆ ವಿಸ್ತರಣೆ ಮಾಡಲಾಗಿದ್ದ ಅವಧಿಯನ್ನು ಈಗ ರಾಜ್ಯ ಸರ್ಕಾರವು ಮತ್ತೆ ವಿಸ್ತರಣೆ ಮಾಡಿದೆ. ನಂಬರ್ ಪ್ಲೇಟ್ ಅಳವಡಿಸದ ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ ಸಿಕ್ಕಿದೆ.

ಹೊಸ ನಂಬರ್ ಪ್ಲೇಟ್ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕೈಗೊಳ್ಳಬಾರದು ಎಂದು ಹೈಕೋರ್ಟ್‌ ಮೇ 21ರಂದು ಹೊರಡಿಸಿದ್ದ ಆದೇಶ ಜುಲೈ 4ರವರೆಗೆ ವಿಸ್ತರಣೆಯಾಗಿರುವುದರಿಂದ ವಾಹನ ಮಾಲೀಕರಿಗೆ ತೊಂದರೆ ತಪ್ಪಿತ್ತು. ಈಗ ಜುಲೈ 4 ಕೂಡ ಹತ್ತಿರ ಬಂದಿದ್ದು, ಇನ್ನೂ ಲಕ್ಷಾಂತರ ವಾಹನಗಳ ಮಾಲೀಕರು ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆ ಮಾಡಿಕೊಳ್ಳದ ಕಾರಣ ಸೆಪ್ಟೆಂಬರ್‌ 15ರವರೆಗೆ ಗಡುವನ್ನು ವಿಸ್ತರಣೆ ಮಾಡಲಾಗಿದೆ.

ಹೊಸ ಮಾದರಿಯ ಸುರಕ್ಷಿತ ನಂಬರ್ ಪ್ಲೇಟ್ ಅಳವಡಿಕೆಗೆ ನೀಡಲಾಗಿರುವ ಗಡುವು ವಿಸ್ತರಿರಣೆಗೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಎಚ್‌ಎಸ್‌ಆರ್‌ಪಿ ತಯಾರಿಕಾ ಕಂಪನಿ ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು .ಅದನ್ನು ವಿಚಾರಣೆ ಮಾಡಿದ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆವಿ ಅರವಿಂದ್‌ ಅವರಿದ್ದ ವಿಭಾಗೀಯ ಪೀಠ ಜುಲೈ 4ರ ವರೆಗೆ ವಿಸ್ತರಣೆ ಮಾಡುವಂತೆ ಹೇಳಿತ್ತು

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಈ ವಿಷಯ ತಿಳಿಸಿದರು. “ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ಸೆಪ್ಟೆಂಬರ್‌ 15ರವರೆಗೆ ಕಾಲಾವಕಾಶ ನೀಡಲಾಗಿದೆ. ಸೆಪ್ಟೆಂಬರ್‌ 15ರ ಬಳಿಕ ರಾಜ್ಯ ಸರ್ಕಾರವು ಯಾವುದೇ ಕಾರಣಕ್ಕೂ ಗಡುವನ್ನು ವಿಸ್ತರಣೆ ಮಾಡುವುದಿಲ್ಲ” ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ.

 

 

 

Related Articles

Back to top button
error: Content is protected !!