ಸಾಂಸ್ಕೃತಿಕ

ರಾಜ್ಯದಲ್ಲಿ ನಡೆಯುತ್ತಿರುವ ದರ್ಶನ್, ಪ್ರಜ್ವಲ್,ಸೂರಜ್ ಕುರಿತು ರಮ್ಯಾ ಹೇಳಿದ್ದೇನು?

Views: 131

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡುತ್ತಿವೆ. ಇದರಿಂದ ಎಲ್ಲರೂ ಕರ್ನಾಟಕದ ಕಡೆ ಕೈ ಮಾಡಿ ತೋರಿಸುವಂತೆ ಆಗಿದೆ. ರಾಜಕಾರಣಿ ಹೆಚ್.ಡಿ ರೇವಣ್ಣ, ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ ಹಾಗೂ ನಟ ದರ್ಶನ್ ಪ್ರಕರಣಗಳ ಸುದ್ದಿಗಳು ಇತ್ತೀಚಿನ ದಿನಗಳಲ್ಲಿ ಜನರನ್ನು ಹೆಚ್ಚು ಹೆಚ್ಚು ತಲುಪಿವೆ. ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಸ್ಯಾಂಡಲ್ ವುಡ್ ನಟಿ ರಮ್ಯಾ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ತಮ್ಮ ಅಧಿಕೃತ ಎಕ್ಸ್ ಅಕೌಂಟ್ನಲ್ಲಿ ಪೋಸ್ಟ್ ಶೇರ್ ಮಾಡಿ ಬೇಸರ ವ್ಯಕ್ತಪಡಿಸಿರುವ ರಮ್ಯಾ ಅವರು, ಹಣವಂತರು ಹಾಗೂ ಬಲವಂತರು ಇಂದು ಸುದ್ದಿಯಲ್ಲಿದ್ದು ಕಾನೂನು ಉಲ್ಲಂಘನೆ ಮಾಡುತ್ತಿದ್ದಾರೆ. ಇವರ ಕ್ರೌರ್ಯವನ್ನು ಕರ್ನಾಟಕದ ಸಾಮಾನ್ಯ ಜನರು, ಬಡವರು, ಮಹಿಳೆಯರು ಮತ್ತು ಮಕ್ಕಳು ಎದುರಿಸುತ್ತಿದ್ದಾರೆ. ಇಂತಹ ಹೀನ ಕೃತ್ಯಗಳನ್ನು ಬಯಲಿಗೆಳೆದ ಪೊಲೀಸರು ಹಾಗೂ ಮಾಧ್ಯಮಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.

ಕೃತ್ಯಗಳನ್ನು ಶೀಘ್ರ ವಿಚಾರಣೆ ನಡೆಸಿ, ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವಾಗ ಮಾತ್ರ ನಿಜವಾಗಿಯೂ ಜನರಿಗೆ ನ್ಯಾಯ ಸಿಕ್ಕಂತೆ ಆಗುತ್ತದೆ. ಒಂದು ವೇಳೆ ನ್ಯಾಯ ಸಿಗದೆ ಇದ್ದರೆ ಜನರಿಗೆ ನಾವು ಯಾವ ಸಂದೇಶ ನೀಡಿದಂತಾಗುತ್ತೆ ಎಂದು ನಟಿ ರಮ್ಯಾ ಅವರು ಪ್ರಶ್ನೆ ಮಾಡಿದ್ದಾರೆ.

Related Articles

Back to top button
error: Content is protected !!