ರಾಜಕೀಯ
ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ

Views: 87
ಬೆಂಗಳೂರು: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು 14 ದಿನ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇಂದು ಹಾಸನದಲ್ಲಿ ಹಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಅಲ್ಲಿಂದ ನೇರವಾಗಿ ಸೂರಜ್ ರೇವಣ್ಣರನ್ನು ಬೆಂಗಳೂರಿನ ಕೋರಮಂಗಲದಲ್ಲಿರುವ 42ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಯಿತು. ನ್ಯಾಯಾಧೀಶರು ಸೂರಜ್ ರೇವಣ್ಣರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿದರು.






