ಇತರೆ
ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಮೃತಪಟ್ಟ ಗರ್ಭಿಣಿ:ಆಸ್ಪತ್ರೆ ಮುಂದೆ ಶವವಿಟ್ಟು ಕುಟುಂಬಸ್ಥರ ಪ್ರತಿಭಟನೆ

Views: 166
ಬಾಗಲಕೋಟೆ: ಹೆರಿಗೆಗೆಂದು ಬಂದ ಗರ್ಭಿಣಿ ಸಾವನ್ನಪ್ಪಿದ ಘಟನೆ ಬೀಳಗಿ ಪಟ್ಟಣದಲ್ಲಿ ನಡೆದಿದೆ. ಅಲ್ಲಿನ ಬಸವ ಪಾಲಿ ಕ್ಲಿನಿಕ್ ಹೆಸರಿನ ಖಾಸಗಿ ಆಸ್ಪತ್ರೆಯಲ್ಲಿ ದುರ್ಘಟನೆ ನಡೆದಿದೆ.
ಸಾವನ್ನಪ್ಪಿರುವ ಗರ್ಭಿಣಿಯನ್ನು ಲಕ್ಷ್ಮೀ ಅಪ್ಪಾಲಾಲ ಲಮಾಣಿ (28) ಎಂದು ಗುರುತಿಸಲಾಗಿದೆ.
ಲಕ್ಷ್ಮೀ ಅಪ್ಪಾಲಾಲ ಲಮಾಣಿಯವರು ಜಾನಟ್ಟಿ ಲಮಾಣಿ ತಾಂಡಾ 1 ಗ್ರಾಮದ ಮಹಿಳೆ. ಹೆರಿಗೆಗೆಂದು ಹೆರಿಗೆಗೆಂದು ಬಸವ ಪಾಲಿ ಕ್ಲಿನಿಕ್ ಬಂದಿದ್ದರು. ಆದರೆ ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಗರ್ಭಿಣಿ ಮೃತಪಟ್ಟಿದ್ದಾರೆ.
ಮಹಿಳೆ ಸಾವಿಗೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಕಾರಣ ಅಂತ ಕುಟುಂಬಸ್ಥರು ಆರೋಪಿಸಿದ್ದಾರೆ. ಮಾತ್ರವಲ್ಲದೆ, ಖಾಸಗಿ ಆಸ್ಪತ್ರೆ ಮುಂಭಾಗದ ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.
ನ್ಯಾಯ ಸಿಗೋವರೆಗೂ ಪ್ರತಿಭಟನೆಯಿಂದ ಸರಿಯಲ್ಲ ಎಂದು ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ. ಶವ ಇಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ.






