ಸಾಮಾಜಿಕ

ಶಾಸಕ ಪ್ರದೀಪ್ ಈಶ್ವರ್‌ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ

Views: 83

ಚಿಕ್ಕಬಳ್ಳಾಪುರ : ಶಾಸಕ ಪ್ರದೀಪ್ ಈಶ್ವರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಅಹಿಂದ ಮತ್ತು ಬೆಂಗಲಿಗರು ಹಾಗೂ ಬಲಿಜ ಸಮುದಾಯದ ಮುಖಂಡರು ಒತ್ತಾಯಿಸಿದರು.

ನಗರದ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರಸಭಾ ಸದಸ್ಯ ಎಸ್.ಎಂ.ರಫೀಕ್, ಸಂಪುಟ ಪುನರ್ ರಚನೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕರಿಗೆ ಸ್ಥಾನ ನೀಡಬೇಕು ಎಂದರು.

ದಸಂಸ ಮುಖಂಡ ಸುಧಾ ವೆಂಕಟೇಶ್ ಮಾತನಾಡಿ, ಅಹಿಂದ ವರ್ಗದಡಿ ಬರುವ ಬಲಜಿಗ ಸಮುದಾಯದ ಏಕೈಕ ಶಾಸಕ ಪ್ರದೀಪ್ ಈಶ್ವರ್ ಅವರನ್ನು ಸಚಿವರಾಗಿ ಮಾಡಬೇಕು ಎಂದು ಎಂದರು.

ಯಾದವ ಸಮುದಾಯದ ಮುಖಂಡ ಕೆ.ಎಂ.ಮುನೇಗೌಡ ಮಾತನಾಡಿ, ಸಂಪುಟ ಪುನಾರಚನೆ ಆಗುವುದೆಂದು ಮಾಹಿತಿ ಇದೆ.ಇದು ನಿಜವೇ ಆಗಿದ್ದರೆ ಸಾಮಾಜಿಕ ನ್ಯಾಯದ ಪರವಾಗಿ ಕೆಲಸ ಮಾಡಬೇಕು. ಪ್ರದೀಪ್ ಈಶ್ವರ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದರು. ಬಲಿಜ ಮುಖಂಡ ಕೆ.ಎಲ್.ಶ್ರೀನಿವಾಸ್ ಮಾತನಾಡಿ, ಜಿಲ್ಲೆಯ ಅಹಿಂದ ವರ್ಗದ ಏಕೈಕ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಸಚಿವ ಸ್ಥಾನ ನೀಡಲು ಮುಖ್ಯಮಂತ್ರಿಗಳಿಗೆ ಒತ್ತಾಯ ಮಾಡುತ್ತೇವೆ. ಸ್ವಾತಂತ್ರ ಬಂದಾಗಿನಿಂದ ಬಲಿಜ ಸಮುದಾಯದಿಂದ ಯಾರೂ ಮಂತ್ರಿ ಆಗಿಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅಹಿಂದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

Related Articles

Back to top button
error: Content is protected !!