ಕರಾವಳಿ

ದಕ್ಷಿಣ ಕನ್ನಡ :ಮನೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು 

Views: 276

ಉಳ್ಳಾಲ (ದಕ್ಷಿಣ ಕನ್ನಡ): ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ಮನೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.

ಮೃತರನ್ನು ಯಾಸಿರ್ (45), ಪತ್ನಿ ಮರಿಯಮ್ಮ (40) ಮತ್ತು ಮಕ್ಕಳಾದ ರಿಯಾನ ಮತ್ತು ರಿಫಾನ ಮೃತರು ಎಂದು ಗುರುತಿಸಲಾಗಿದೆ.

ಅಬೂಬಕ್ಕರ್ ಎಂಬವರಿಗೆ ಸೇರಿದ ಮನೆಯ ಗೋಡೆಯು ಯಾಸಿರ್ ಅವರ ಮನೆಯ ಮೇಲೆ ಬಿದ್ದಿದೆ. ಇದರ ಪರಿಣಾಮ ಮನೆ ಕುಸಿತವಾಗಿದೆ. ಮನೆಯಲ್ಲಿ ಮಲಗಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಮೂವರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಬಾಲಕಿ ಮೃತದೇಹಕ್ಕಾಗಿ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ ನಡೆಯುತ್ತಿದೆ‌ ಎಂದು ಪೊಲೀಸರು ತಿಳಿಸಿದ್ದಾರೆ.

Related Articles

Back to top button
error: Content is protected !!