ಕರಾವಳಿ

ಕರಾವಳಿಯಲ್ಲಿ ಭಾರಿ ಮಳೆ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂ.27ರಂದು ಶಾಲೆಗಳಿಗೆ ರಜೆ ಘೋಷಣೆ

Views: 228

ಮಂಗಳೂರು: ಕರಾವಳಿ ಭಾಗ ಉಡುಪಿ, ದಕ್ಷಿಣ ಕನ್ನಡ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂ.27ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಅಂಗನವಾಡಿಯಿಂದ ಪ್ರೌಢ ಶಾಲೆವರೆಗೂ ರಜೆ ನೀಡಿ ಜಿಲ್ಲಾಧಿಕಾರಿ ಮುಗಿಲನ್ ಅವರು ಇಂದು ಆದೇಶ ಹೊರಡಿಸಿದ್ದಾರೆ. ಅಲ್ಲದೇ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದಾರೆ. ನಿನ್ನೆ ರಾತ್ರಿ ಇಡೀ ಮಳೆ ಸುರಿದಿದೆ. ಇದರಿಂದ ಜಿಲ್ಲೆಯಾದ್ಯಂತ ಭಾರೀ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಇಂದು ರಾತ್ರಿ ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು, ನಾಳೆ ಶಾಲೆಗಳಿಗೆ ರಜೆ ನೀಡಿದ್ದಾರೆ.

 

Related Articles

Back to top button
error: Content is protected !!