ಕರಾವಳಿ

ಉಡುಪಿ: ಭಾರಿ ಮಳೆ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ರಜೆ ನೀಡುವ ಕುರಿತು ಜಿಲ್ಲಾಧಿಕಾರಿ ಹೇಳಿದ್ದೇನು?

Views: 1198

ಉಡುಪಿ:ಭಾರೀ ಮಳೆಯ ಕಾರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಅಂಗನವಾಡಿಯಿಂದ ಪ್ರೌಢ ಶಾಲೆಯವರೆಗೆ ನಾಳೆ (ಜೂ.27) ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಮಳೆ ಕಡಿಮೆ ಇರುವ ಕಾರಣ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಯಾವುದೇ ಕ್ಷಣದಲ್ಲಿ ಮಳೆಯ ಪ್ರಮಾಣ  ಹೆಚ್ಚಾದರೆ ಮುಂದಿನ ಪರಿಸ್ಥಿತಿ ಅವಲೋಕಿಸಿ ರಜೆ ಘೋಷಿಸುವ ಸಾಧ್ಯತೆ ಇದೆ. ಆದರೆ ಸದ್ಯಕ್ಕೆ ಉಡುಪಿ ಜಿಲ್ಲೆಗೆ ರಜೆಯಿರುವುದಿಲ್ಲ ಎಂದು ತಿಳಿದು ಬಂದಿದೆ.

 

Related Articles

Back to top button
error: Content is protected !!