ಇತರೆ

ನಿಶ್ಚಿತಾರ್ಥ ಮುಗಿಸಿ ಬರುವಾಗ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಓರ್ವ ಸಾವು, 10 ಮಂದಿ ಗಂಭೀರ

Views: 120

ವಿಜಯನಗರ: ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿ 10 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೆರೆ ಕ್ರಾಸ್ ನಲ್ಲಿ ನಡೆದಿದೆ.

ಕೃಷ್ಣಪ್ಪ (62) ಮೃತ ದುರ್ದೈವಿ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಟಿಟಿ ವಾಹನ ಡಿಕ್ಕಿಯಾಗಿ ಅನಾಹುತ ಸಂಭವಿಸಿದೆ. ಕಲುಬುರಗಿಯಲ್ಲಿ ನಿಶ್ಚಿತಾರ್ಥ ಮುಗಿಸಿಕೊಂಡು ಚಿಕ್ಕಬಳ್ಳಾಪುರದ ಆರೋಡಿ ಗ್ರಾಮಕ್ಕೆ ತೆರಳುತ್ತಿದ್ದರು. ಟಿಟಿ ವಾಹನದಲ್ಲಿ ಇಬ್ಬರು ಮಕ್ಕಳು ಸೇರಿದಂತೆ 16 ಮಂದಿ ಪ್ರಯಾಣಿಕರಿದ್ದರು.

ಗಂಗಾವತಿಯಿಂದ ಮೈಸೂರಿಗೆ ತೆರಳುತ್ತಿದ್ದ ಲಾರಿ ಕೆಟ್ಟು ನಿಂತಿತ್ತು. ಡಿಕ್ಕಿ ರಭಸಕ್ಕೆ ಟಿಟಿ ವಾಹನ ನುಜ್ಜು-ಗುಜ್ಜಾಗಿದೆ, ಇಬ್ಬರು ಸಿಲುಕಿಕೊಂಡಿದ್ದರು. ಅವರನ್ನು ಹೊರ ತೆಗೆಯಲು ಹರಸಾಹಸ ಪಡಬೇಕಾಯಿತು. ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!