ಯುವಜನ

ಎಂದಿನಂತೆ ಕೆಲಸಕ್ಕೆ ಹಾಜರಾಗಲು ರೆಡಿಯಾಗುತ್ತಲೇ ಹಠಾತ್ ಹೃದಯಾಘಾತಕ್ಕೆ ಯುವತಿ ಸಾವು

Views: 178

ಕೊಡಗು: ಇಂದು ಬೆಳಗ್ಗೆ ಯುವತಿಯೊಬ್ಬರು ಹೃದಯಾಘಾತದಿಂದ ‌ಮೃತಪಟ್ಟಿರುವ ಘಟನೆ ಮಡಿಕೇರಿ ತಾಲೂಕಿನ ನೆಲಜಿ ಗ್ರಾಮದಲ್ಲಿ ನಡೆದಿದೆ.

ನೆಲಜಿ ಗ್ರಾಮದ ಕಾಫಿ ಬೆಳೆಗಾರರಾದ ಪೊನ್ನಪ್ಪ ಅವರ ಮಗಳು ನಿಲಿಕಾ ಪೊನ್ನಪ್ಪ (24) ಮೃತ ಯುವತಿ. ಆಕೆ ಮಡಿಕೇರಿಯಲ್ಲಿರುವ ಕೊಡಗು ವೈದ್ಯಕೀಯ ಕಾಲೇಜು ಮತ್ತು ಬೋಧಕ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಎಂದಿನಂತೆ ಕೆಲಸಕ್ಕೆ ಹಾಜರಾಗಬೇಕು ಎಂದು ಇಂದು ಬೆಳಗ್ಗೆ ಮನೆಯಲ್ಲಿ ರೆಡಿಯಾಗುತ್ತಿದ್ದರು. ಕರ್ತವ್ಯಕ್ಕೆ ಹೊರಟಾಗ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಯುವತಿ ನಿಲಿಕಾ ವಾಪಸ್ ತನ್ನ ಕೋಣೆಗೆ ಹೋಗಿ ಹಾಸಿಗೆ ಮೇಲೆ ಕುಸಿದು ಬಿದ್ದಿದ್ದಾಳೆ. ಯುವತಿ ತಾಯಿ ಹಿಂದಿನಿಂದ ಹೋಗಿ ಏನಾಯಿತು ಮಗಳೇ ಎಂದು ಕೇಳುವಷ್ಟರಲ್ಲಿಯೇ ನಿಲಿಕಾಳ ಪ್ರಾಣ ಪಕ್ಷಿ ಹಾರಿ ಹೋಗಿದೆ.ಮಗಳನ್ನು ಕಳೆದುಕೊಂಡ ಪೋಷಕರು, ಸಂಬಂಧಿಗಳ ಆಕ್ರಂದನ ಮುಗಿಲು ಮುಟ್ಟಿದೆ.

Related Articles

Back to top button
error: Content is protected !!