ರಾಜಕೀಯ
70 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ಘೋಷಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

Views: 3938
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಜಂಟಿ ಅಧಿವೇಶನ ಉದ್ದೇಶಿಸಿ ಇಂದು ಭಾಷಣದ ಆರಂಭದಲ್ಲೇ 18ನೇ ಲೋಕಸಭೆಗೆ ಆಯ್ಕೆಯಾದ ಎಲ್ಲ ಸಂಸದರಿಗೆ ಅಭಿನಂದನೆ ಹೇಳಿದರು. ಬಳಿಕ ಮೋದಿ ಸರ್ಕಾರಕ್ಕೆ ಅಭಿನಂದನೆ ಹೇಳಿದ ಅವರು, ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಅತ್ಯುತ್ತಮ ಕೆಲಸಗಳನ್ನು ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿ ಶುಭಕೋರಿದರು.
ನಮ್ಮ ಸರ್ಕಾರ ಹೊಸ ಮಹತ್ವದ ನಿರ್ಧಾರ ತೆಗೆದುಕೊಳ್ಳುತ್ತಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ 70 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ವೃದ್ಧರಿಗೆ( ಹಿರಿಯ ನಾಗರಿಕರಿಗೆ) ಉಚಿತ ಚಿಕಿತ್ಸೆ ನೀಡಲಿದ್ದೇವೆ ಎಂದು ತಮ್ಮ ಹೊಸ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.






