ಜನಮನ
ಹಾವೇರಿಯಲ್ಲಿ ಬೆಳಗಿನ ಜಾವ ದೇವರ ದರ್ಶನ ಮುಗಿಸಿ ವಾಪಸ್ ಬರುವಾಗ ಭೀಕರ ಅಪಘಾತ:13 ಭಕ್ತರ ದಾರುಣ ಸಾವು

Views: 347
ಹಾವೇರಿ: ಹಿಂಬದಿಯಿಂದ ಲಾರಿಗೆ ಟಿಟಿ ವಾಹನ ಡಿಕ್ಕಿಯಾಗಿ 13 ಪ್ರಯಾಣಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್ ಬಳಿ ನಡೆದಿದೆ.
ದುರ್ಘಟನೆಯಲ್ಲಿ ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಮೃತರು ಸವದತ್ತಿ ಯಲ್ಲಮ್ಮನ ದರ್ಶನಕ್ಕೆಂದು ತೆರಳಿದ್ದರು. ದೇವರ ದರ್ಶನ ಮುಗಿಸಿ ವಾಪಸ್ ಬರುವಾಗ ದುರ್ಘಟನೆ ಸಂಭವಿಸಿದೆ. ಮೃತರೆಲ್ಲ ಶಿವಮೊಗ್ಗ ಮೂಲದ ನಿವಾಸಿಗಳು ಎನ್ನಲಾಗಿದೆ.
ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಡಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.






