ಕರಾವಳಿ

ನಾಯಿಯೊಂದು ಬೈಕ್‌ಗೆ ಅಡ್ಡ ಬಂದು ಬೈಕ್‌ ಪಲ್ಟಿಯಾಗಿ ನವವಿವಾಹಿತೆ ಸಾವು 

Views: 383

ಕಾರ್ಕಳ : ನಾಯಿಯೊಂದು ಬೈಕ್‌ಗೆ ಅಡ್ಡ ಬಂದ ಪರಿಣಾಮ ಬೈಕ್‌ ಪಲ್ಟಿಯಾಗಿ ನವವಿವಾಹಿತೆ ದಾರುಣವಾಗಿ ಸಾವಿಗೀಡಾದ ಘಟನೆ ಹೊಸ್ಮಾರು ಬಳಿ ಸಂಭವಿಸಿದೆ.

ಮೃತ ನವ ವಿವಾಹಿತೆ ಈದು ಗ್ರಾಮದ ಕರೆಂಬಾಲುವಿನ ವಿಶಾಲ್ ಅವರ ಪತ್ನಿ ನೀಕ್ಷಾ (26) ಎಂದು ಗುರುತಿಸಲಾಗಿದೆ.

ಕಾರ್ಕಳ ಗುರುವಾಯನಕೆರೆ ರಸ್ತೆಯ ಹೊಸ್ಮಾರು ಸೇತುವೆ ಬಳಿ ಜೂ. 28ರ ಸಂಜೆ ಗಂಡನೊಂದಿಗೆ ಬೈಕ್‌ನಲ್ಲಿ ಸಾಗುತ್ತಿದ್ದಾಗ ನಾಯಿ ದಿಢೀರೆಂದು ಅಡ್ಡ ಬಂದಿದ್ದು, ಪರಿಣಾಮ ಬೈಕ್‌ ರಸ್ತೆಗೆಸೆಯಲ್ಪಟ್ಟಿತ್ತು.

ಘಟನೆಯಿಂದ ಸಹಸವಾರೆ ನೀಕ್ಷಾ ಅವರಿಗೆ ತೀವ್ರ ಸ್ವರೂಪದ ಗಾಯವಾಗಿದ್ದು, ಆಸ್ಪತ್ರೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಕುಟುಂಬದ ದುರಂತವೆಂದರೆ ನೀಕ್ಷಾರವರು ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು.ಅವರ ತಂದೆ ಪ್ರೀತಿ ಟೈಮ್ಸ್ ಸೆಂಟರ್ ಮಾಲಕ ಪ್ರಕಾಶ್ ಅವರು 9 ತಿಂಗಳ ಹಿಂದೆಯಷ್ಟೇ ವಿಧಿವಶರಾಗಿದ್ದರು. ನೀಕ್ಷಾ ರವರ ಮೃತದೇಹ ಕಾರ್ಕಳ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿದೆ.

Related Articles

Back to top button
error: Content is protected !!