ರಾಜಕೀಯ

ಮನೆ ಯಜಮಾನಿಗೆ ಪ್ರತಿ ತಿಂಗಳು 2,000 ಹಣ ಜಮೆ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್‌ ಏನಂದ್ರು?

Views: 253

ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 2,000 ರೂಪಾಯಿ ನೀಡಲಾಗುತ್ತಿತ್ತು. ಆದರೆ ಇದೀಗ ಕೆಲವೆಡೆ ಕಳೆದ ಎರಡು ತಿಂಗಳಿಂದಲೂ ಖಾತೆಹೆ ಗೃಹಲಕ್ಷ್ಮಿ ಹಣ ಬಿದ್ದಿಲ್ಲ ಎನ್ನುವ ಆರೋಪಗಳು ಬಂದಿವೆ. ಇದಕ್ಕೆ ಇಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸ್ಪಷ್ಟನೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, “ಯಾವುದೇ ಸಂದರ್ಭದಲ್ಲಿ 5 ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ. ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲ, ಸುಮ್ಮನೆ ಕಾರಣ ಆರೋಪ ಮಾಡುತ್ತಿದ್ದಾರೆ. ಅಧಿಕಾರ ಕೊಟ್ಟಾಗ 40% ಕಮಿಷನ್ ತೆಗೆದುಕೊಂಡು ಮನೆಯಲ್ಲಿ ಕುಳಿತರು” ಎಂದು ಆಕ್ರೋಶ ಹೊರಹಾಕಿದರು.

ಇನ್ನೂ ಗೃಹಲಕ್ಷ್ಮಿ ಹಣವನ್ನು ಮೇ 1ರಂದು ಕೊಟ್ಟಿದ್ದೆವು. ಜೂನ್ ತಿಂಗಳ ಹಣ ಈಗಾಗಲೇ ಟ್ರೆಷರಿಗೆ ಹಾಕಲಾಗಿದೆ ಎಂದು ತಿಳಿಸಿದ್ದಾರೆ. ಇಂದು ಅಥವಾ ನಾಳೆ ಗೃಹಲಕ್ಷ್ಮಿ ಹಣ ಯಜಮಾನಿಯ ಖಾತೆಗೆ ಕ್ರೆಡಿಟ್‌ ಆಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸ್ಪಷ್ಟನೆ ನೀಡಿದ್ದಾರೆ.

ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಾರದ ಹಿನ್ನೆಲೆ ಹಲವೆಡೆ ಮಹಿಳೆಯರು ಪ್ರತಿಭಟನೆಗೆ ಮುಂದಾಗಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌, ಮೇ, ಜೂನ್‌ ತಿಂಗಳ ಹಣ ಹಾಕಿದ್ದೇವೆ. ಅದು ಇಂದು ಅಥವಾ ನಾಳೆ ಯಜಮಾನಿಯರ ಖಾತೆಗೆ ಹಣ ಕ್ರೆಡಿಟ್‌ ಆಗಲಿದೆ ಎಂದು ಹೇಳಿದ್ದಾರೆ.

ಗೃಹಲಕ್ಷ್ಮಿ ಹಣ ಹಣ ಬಾರದೇ ಇರುವ ಫಲಾನುಭವಿಗಳು ತಪ್ಪದೇ ಈ ಕೆಲಸ ಮಾಡಿದರೆ, ಖಾತೆಗೆ ಒಟ್ಟಿಗೆ ಹಣ ಬೀಳಲಿದೆ. ರಾಜ್ಯ ಸರ್ಕಾರವು ಮೊದಲಿಗೆ ಪೆಂಡಿಂಗ್ ಇರುವ ಎಲ್ಲಾ ಹಣವನ್ನು ಫಲಾನುಭವಿಗಳಿಗೆ ಬಿಡುಗಡೆ ಮಾಡಿದ ಬಳಿಕ 11ನೇ ಕಂತಿನ ಹಣವನ್ನ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ.

ಇನ್ನೂ ಸಾಕಷ್ಟು ಜನ ಬ್ಯಾಂಕ್‌ನಲ್ಲಿ ಖಾತೆ ಹೊಂದಿದ್ದರೂ ಕೂಡ ಆಧಾರ್‌ ಕಾರ್ಡ್‌ ಅನ್ನು ಲಿಂಕ್‌ ಮಾಡಿಕೊಂಡಿಲ್ಲ. ಆದ್ದರಿಂದ ಅಂತಹವರಿಗೆ ಹಣ ಬರುತ್ತಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡರೂ ಸಹಾಯಧನ ಪಾವತಿಯಾಗದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್‌ಗಳಲ್ಲಿ ಪರಿಹರಿಸಿಕೊಳ್ಳಬೇಕು.

ಬಳಿಕ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ, ಇ-ಕೆವೈಸಿ ಅಪ್‌ಡೇಟ್‌ ಮಾಡಿಸಿ, ದೃಢೀಕರಣ ಪಡೆದು ಅವುಗಳನ್ನು ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿ ಕೇಂದ್ರಗಳ ಕಾರ್ಯಕರ್ತೆಯರಿಗೆ ಒದಗಿಸಿದರೆ, ಸಹಾಯಧನ ಪಾವತಿಸಲು ಕ್ರಮವಹಿಸಲಾಗುವುದು ಎನ್ನಲಾಗಿದೆ.

Related Articles

Back to top button
error: Content is protected !!