ಕರಾವಳಿ
ಸಂಸದ ಕೋಟ ಶ್ರೀನಿವಾಸ ಪೂಜಾರಿ ತಾಯಿ ನಿಧನ

Views: 408
ಕೋಟ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ (97) ವಯೋಸಹಜ ಅಸೌಖ್ಯದಿಂದ ಜೂ.30ರಂದು ನಿಧನ ಹೊಂದಿದರು. ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.ಇವರು ಉತ್ತಮ ಕೃಷಿಕರಾಗಿದ್ದರು.ಪೂಜಾರಿಯವರು ತನ್ನ ರಾಜಕೀಯ ಜೀವನದಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸುವ ಪ್ರತಿ ಸಂದರ್ಭ ತಾಯಿ ವಾಸವಿರುವ ಮನೆಗೆ ತೆರಳಿ ಆಶೀರ್ವಾದ ಪಡೆಯುತ್ತಿದ್ದರು.






