ಆರ್ಥಿಕ
ಉಡುಪಿ: ಗಮನಕ್ಕೆ ಬಾರದೆ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Views: 255
ಮಣಿಪಾಲ: ಇಲ್ಲಿನ ವಕ್ತಿಯೊಬ್ಬರ ಎಸ್‌ಬಿ ಖಾತೆಯಿಂದ ಮತ್ತೊಂದು ಖಾತೆಗೆ ಲಕ್ಷಾಂತರ ರೂ. ವರ್ಗಾವಣೆಗೊಂಡ ಘಟನೆ ನಡೆದಿದೆ.
ಕಾರ್ಕಳ ಪಳ್ಳಿ ನಿವಾಸಿ ಡಾ.ಗೋಪಿನಾಥ್ ಅವರು ಮಣಿಪಾಲದ ಐಸಿಐಸಿಐ ಬ್ಯಾಂಕ್‌ನಲ್ಲಿ ಎಸ್‌ಬಿ ಖಾತೆ ಹೊಂದಿದ್ದರು. ಅದರಿಂದ ಜ. 27ರಿಂದ ಜೂ.20ರ ವರೆಗೆ ಸುಮಾರು 2,08,004ರೂ.ಗಳು ಸುಮಾರು 177 ಸಲ ಬೇರೆ ಬೇರೆ ಕಂತುಗಳಲ್ಲಿ ಗೂಗಲ್ ಪೇ ಇರುವ ಖಾತೆಗೆ ವರ್ಗಾವಣೆಯಾಗಿದೆ. ಸಂಬಂಧಪಟ್ಟ ಬ್ಯಾಂಕ್‌ಗೆ ಹೋಗಿ ಅಧಿಕಾರಿಗಳನ್ನು ವಿಚಾರಿಸಿದಾಗ ಒಟಿಪಿ-ಡೆಬಿಟ್ ಕಾರ್ಡ್ ಮೂಲಕ ಹಣ ವರ್ಗಾ ವಣೆಯಾಗಿದೆ ಎಂದು ತಿಳಿಸಿದ್ದಾರೆ.
ಆದರೆ ಡಾ. ಗೋಪಿನಾಥ್ ಅವರಿಗೆ ವರ್ಗಾವಣೆಗೆ ಸಂಬಂಧಪಟ್ಟ ಯಾವುದೇ ಒಟಿಪಿ ಅಥವಾ ಸಂದೇಶಗಳು ಬಂದಿಲ್ಲ. ಯಾರೋ ಅಪರಿಚಿತ ವ್ಯಕ್ತಿ ಅವರ ಗಮನಕ್ಕೆ ಬಾರದೆ ಅವರ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾಯಿಸಿದ್ದಾರೆ ಎಂದು ಅವರು ಮಣಿಪಾಲ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.






