ಆರೋಗ್ಯ

ದಕ್ಷಿಣ ಕನ್ನಡ ಜಿಲ್ಲಾ ಶ್ರೇಷ್ಠ ವೈದ್ಯಾಧಿಕಾರಿ ಪ್ರಶಸ್ತಿ ಪಡೆದ ಡಾ.ಶಶಿಕಲಾ ಶೆಟ್ಟಿಗಾರ್

Views: 1590

ದಕ್ಷಿಣ ಕನ್ನಡ :ಬೆಂಗಳೂರು ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ನಡೆದ ರಾಷ್ಟ್ರೀಯ ವೈದ್ಯ ದಿನಾಚರಣೆ ಸಮಾರಂಭದಲ್ಲಿ ಬಂಟ್ವಾಳ ತಾಲೂಕಿನ ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಶಿಕಲಾ ಶೆಟ್ಟಿಗಾರ ಅವರು ದಕ್ಷಿಣ ಕನ್ನಡ ಜಿಲ್ಲಾ ಶ್ರೇಷ್ಠ ವೈದ್ಯಾಧಿಕಾರಿ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಜುಲಾಯಿ 1ರಂದು ಬೆಂಗಳೂರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರು ಆಯೋಜಿಸಿದ ರಾಷ್ಟ್ರೀಯ ವೈದ್ಯರ ದಿನಾಚರಣೆಯ ಸಮಾರಂಭದಲ್ಲಿ ಡಾ.ಶಶಿಕಲಾ ಶೆಟ್ಟಿಗಾರ್ ಅವರನ್ನು  “ದಕ್ಷಿಣ ಕನ್ನಡ ಜಿಲ್ಲಾ ಶ್ರೇಷ್ಠ ವೈದ್ಯಾಧಿಕಾರಿ ಪ್ರಶಸ್ತಿ” ನೀಡಿ ಗೌರವಿಸಲಾಯಿತು.

ಇವರು 19 ವರ್ಷಗಳ ಕಾಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿದ್ದು, ಉಪ್ಪಿನಂಗಡಿಯಲ್ಲಿ 11 ವರ್ಷ  ಸೇವೆ ಸಲ್ಲಿಸಿದ ಇವರು ಪ್ರಸ್ತುತ ಬಂಟ್ವಾಳ ತಾಲೂಕಿನ ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಇವರ ಅತ್ಯುತ್ತಮ ವೈದ್ಯಕೀಯ ಸೇವೆಯನ್ನು ಗುರುತಿಸಿ ಹಲವಾರು ಸಂಸ್ಥೆಗಳಿಂದ ಗೌರವ ಸನ್ಮಾನ ಪಡೆದಿರುತ್ತಾರೆ.

ಇವರ ಪತಿ ಶೈಲೇಂದ್ರ ಶೆಟ್ಟಿಗಾರ್ ಕಲ್ಲಡ್ಕದಲ್ಲಿ ವೈದ್ಯಾಧಿಕಾರಿಯಾಗಿರುತ್ತಾರೆ. ಕುಂದಾಪುರ ತಾಲೂಕಿನ ವಕ್ವಾಡಿ ಗ್ರಾಮದ ನಿವಾಸಿಯಾಗಿರುವ ಶೀನ ಶೆಟ್ಟಿಗಾರ್ ಮತ್ತು ವಸಂತಿ ಶೆಟ್ಟಿಗಾರ್ ಇವರ ಪುತ್ರಿಯಾಗಿದ್ದಾರೆ.

Related Articles

Back to top button