ಇತರೆ

ಧರ್ಮಸ್ಥಳ: ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Views: 330

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿವಾಸಿ ರಕ್ಷಿತಾ ಜೈನ್ (26) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ.

ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್ ರವರು ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇವರು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದರು ಎನ್ನಲಾಗಿದೆ.

ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಪ್ರಕರಣ‌ ದಾಖಲಿಸಿಕೊಂಡಿದ್ದಾರೆ.

Related Articles

Back to top button
error: Content is protected !!