ಇತರೆ

ಬೆನ್ನಿಗೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿದ ಮಡಿವಾಳ ಪೊಲೀಸ್‌ ಕಾನ್ಸ್‌ಟೇಬಲ್ ಶವ ಪತ್ತೆ 

Views: 180

ಬೆಂಗಳೂರು: ನಾಪತ್ತೆಯಾಗಿದ್ದ ಕಾನ್ಸ್‌ಟೇಬಲ್‌ ಪಾಳು ಬಾವಿಯಲ್ಲಿ  ಶವವಾಗಿ ಪತ್ತೆಯಾಗಿದ್ದರು. ಮಡಿವಾಳ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕೆಲಸ ಮಾಡುತ್ತಿದ್ದ ಶಿವರಾಜ್ ಕಳೆದ ಜೂ. 26ರಂದು ನಾಪತ್ತೆ ಆಗಿದ್ದರು. ಸುಬ್ರಹ್ಮಣ್ಯಪುರ ಠಾಣೆ ಹಾಗೂ ಮಡಿವಾಳ ಠಾಣೆ ಪೊಲೀಸರು ಜಂಟಿಯಾಗಿ ಕಾನ್ಸ್‌ಟೇಬಲ್‌ ಶಿವರಾಜ್‌ಗಾಗಿ ಹುಡುಕಾಟ  ಮಾಡಲು ಬರೋಬ್ಬರಿ 250 ಸಿಸಿಟಿವಿ ಪರಿಶೀಲಿಸಿದ್ದರು.

ಕಳೆದ ಐದು ದಿನಗಳಿಂದ ನಿರಂತರವಾಗಿ ಹುಡುಕಾಟ ನಡೆಸಿದ್ದ ಪೊಲೀಸರು ಸುಬ್ರಹ್ಮಣ್ಯಪುರದಿಂದ ಮೈಸೂರು ರಸ್ತೆಯ ಜ್ಞಾನಭಾರತಿ ಮೆಟ್ರೊ ಸ್ಟೇಷನ್ ವರೆಗೂ ಸಿಸಿಟಿವಿ ಪರಿಶೀಲನೆ ನಡೆಸಿದ್ದರು. ಸಿಸಿಟಿವಿ ಬೆನ್ನು ಹತ್ತಿ ಬಂದಿದ್ದ ಪೊಲೀಸರು ಕೊನೆಗೆ ಜ್ಞಾನಭಾರತಿ ಮೆಟ್ರೊ ಸ್ಟೇಷನ್‌ ತಲುಪಿದ್ದರು.

ಈ ವೇಳೆ ಮೆಟ್ರೊ ಸ್ಟೇಷನ್ ಪಾರ್ಕಿಂಗ್‌ನಲ್ಲಿ ಬೈಕ್ ನಿಲ್ಲಿಸಿದ್ದ ಶಿವರಾಜ್, ನಂತರ ನೀರಿನ ಬಾಟಲಿ ಹಿಡಿದು ಬೆಂಗಳೂರು ವಿಶ್ವವಿದ್ಯಾಲಯದ ಒಳಗೆ ನಡೆದು ಬಂದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಬೆಂಗಳೂರು ವಿವಿ ಆವರಣದೊಳಗೆ ಹುಡುಕಾಡಿದ್ದರು. ಈ ವೇಳೆ ವಿವಿ ಆವರಣದ ಪಾಳು ಬಿದ್ದ ಬಾವಿಯಲ್ಲಿ ಶಿವರಾಜ್ ಮೃತದೇಹ ತೇಲುತ್ತಿತ್ತು.

ಕೂಡಲೇ ಜ್ಞಾನಭಾರತಿ ಠಾಣೆಗೆ ಮಡಿವಾಳ ಪೊಲೀಸರು ಮಾಹಿತಿ ನೀಡಿದ್ದರು. ಸದ್ಯ ಶಿವರಾಜ್‌ ಮೃತಪಟ್ಟಿರುವುದು ಕೊಲೆಯಲ್ಲ ಆತ್ಮಹತ್ಯೆ ಎಂಬ ನಿರ್ಧಾರಕ್ಕೆ ಬಂದಿದ್ದಾರೆ. ಯಾಕೆಂದರೆ ವಿವಿ ಆವರಣದೊಳಗೆ ಶಿವರಾಜ್‌ ಒಬ್ಬೊಂಟಿಯಾಗಿ ನಡೆದುಕೊಂಡು ಬಂದಿದ್ದು, ಬೆನ್ನಿಗೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿದ್ದಾರೆ. ಮೃತದೇಹ ಹೊರತೆಗೆದಾಗ ಮೃತದೇಹಕ್ಕೆ ಕಲ್ಲು ಕಟ್ಟಿರುವುದು ಬೆಳಕಿಗೆ ಬಂದಿದೆ.

 

Related Articles

Back to top button
error: Content is protected !!