ರಾಜಕೀಯ

ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ: ಡಾ.ಮಂಜುನಾಥ್ ಪತ್ನಿ ಅನಸೂಯ?

Views: 193

ರಾಮನಗರ: ಚನ್ನಪಟ್ಟಣ ಉಪಚುನಾವಣೆಗೆ ಒಕ್ಕಲಿಗ ನಾಯಕರಾದ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಡಿ.ಕೆ. ಶಿವಕುಮಾರ್‌ ನಡುವೆ ನಡೆಯುತ್ತಿರುವ ಹೋರಾಟದ ನಡುವೆ, ಒಕ್ಕಲಿಗ ಅಭ್ಯರ್ಥಿಗಳನ್ನೇ ಆಯ್ಕೆ ಮಾಡಲು ಯೋಜಿಸಲಾಗುತ್ತಿದೆ. ಹೀಗಾಗಿ ಚನ್ನಪಟ್ಟಣ ಉಪಚುನಾವಣೆ ಒಕ್ಕಲಿಗರ ಪ್ರಬಲ ನಾಯಕರಿಬ್ಬರ ನಡುವಿನ ಪ್ರತಿಷ್ಠೆಯಾಗಿದೆ.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಡಿ.ಕೆ.ಶಿವಕುಮಾರ್ ಸ್ಪರ್ಧಿಸುವ ಸಾಧ್ಯತೆ ಇರುವುದರಿಂದ ಡಿ.ಕೆ ಸಹೋದರರನ್ನು ಕಟ್ಟಿ ಹಾಕುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಯೋಜನೆ ರೂಪಿಸಿವೆ ಎನ್ನಲಾಗುತ್ತಿದೆ.

ಈಗಾಗಲೇ ಬೆಂಗಳೂರು ಗ್ರಾಮಂತರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ಅವರನ್ನು ಸೋಲಿಸಲಾಗಿದ್ದು, ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಒಂದು ವೇಳೆ ಡಿ.ಕೆ.ಶಿವಕುಮಾರ್ ಚನ್ನಪಟ್ಟಣದಲ್ಲಿ ಉಪಚುನವಣೆಯಲ್ಲಿ ಸ್ಪರ್ಧಿಸಿದರೆ ಅವರನ್ನು ಕೂಡ ಕಟ್ಟಿಹಾಕುವ ನಿಟ್ಟಿನಲ್ಲಿ ಹಾಗೂ ಕಾಂಗ್ರೆಸ್ ನ ಮಹಿಳಾ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸಂಸದ ಡಾ.ಸಿ.ಎನ್.ಮಂಜುನಾಥ್ ಪತ್ನಿ ಅನಸೂಯ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಚಿಂತನೆ ನಡೆಸಿವೆ.

ಅನಸೂಯ ಅವರನ್ನು ಜೆಡಿಎಸ್‌ ಕಣಕ್ಕೆ ಇಳಿಸಿದರೆ, ಕಾಂಗ್ರೆಸ್‌ ಎಚ್‌.ಕುಸುಮ ಅವರನ್ನು ಕಣಕ್ಕೆ ಇಳಿಸುವ ಸಾಧ್ಯತೆ ಇದೆ ಎಂಬ ಮಾತೂ ಚಾಲ್ತಿಗೆ ಬಂದಿದೆ.

ಈಗಷ್ಟೆ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಎನ್‌ಡಿಎ ಮೈತ್ರಿಕೂಟದೊಂದಿಗೆ ಎಚ್‌.ಡಿ. ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದಾರೆ. ಜತೆಗೆ ಚನ್ನಪಟ್ಟಣದಲ್ಲಿ ರಾಜಿನಾಮೆಯಿಂದ ತೆರವಾಗಿರುವ ಶಾಸಕ ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಜೆಡಿಎಸ್‌ ಗೆಲುವು ಕಾಣಲೇಬೇಕು. ಕ್ಷೇತ್ರದಲ್ಲಿ ಜೆಡಿಎಸ್‌ ಉಳಿಸಿಕೊಳ್ಳುವುದು ಎಚ್‌ಡಿಕೆಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.

 

Related Articles

Back to top button
error: Content is protected !!