ಶಿಕ್ಷಣ
ನಾಳೆ ಜುಲೈ5 ರಂದು ಬೈಂದೂರು,ಕುಂದಾಪುರ, ಮತ್ತು ಬ್ರಹ್ಮಾವರ ತಾಲೂಕಿನ ಶಾಲಾ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Views: 144
ಉಡುಪಿ: ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಶುಕ್ರವಾರ ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ, ಮತ್ತು ಬ್ರಹ್ಮಾವರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ,ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ.
ಭಾರೀ ಮಳೆ ಸುರಿಯುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಿ ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಅವರು ಆದೇಶ ಹೊರಡಿಸಿದ್ದಾರೆ.