ಕರಾವಳಿ
ಕೊಲ್ಲೂರು :ವರುಣನ ಅಬ್ಬರಕ್ಕೆ ಗುಡ್ಡ ಕುಸಿದು ಮಹಿಳೆ ಸಾವು

Views: 86
ಉಡುಪಿ:ರಾಜ್ಯದ ಹಲವೆಡೆ ಮಳೆಯ ಆರ್ಭಟ ಜೋರಾಗಿದ್ದು, ವರುಣನ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಉಡುಪಿ ಜಿಲ್ಲೆಯಲ್ಲಿ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದ್ದು, ಮಳೆಯ ಅವಾಂತರಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಮಹಿಳೆಯೊಬ್ಬರು ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ.ಸ್ಥಳೀಯರ ಸಹಾಯದಿಂದ ಮಹಿಳೆಯನ್ನು ಹೊರ ತೆಗೆಯಲಾಗಿದೆ.ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಯಾವುದೇ ಪ್ರಯೋಜನವಾಗದೆ ಸಾವನ್ನಪ್ಪಿದ್ದಾರೆ.
ಹಳ್ಳಿ ಬೇರು ನಿವಾಸಿ ಅಂಬಾ (45) ಮೃತ ಮಹಿಳೆಗೆ ಇಬ್ಬರು ಗಂಡು ಹಾಗೂ ಓರ್ವ ಪುತ್ರಿ ಇದ್ದಾರೆ.






