ಕರಾವಳಿ

ಕುಂದಾಪುರ :ಮುಳ್ಳಿಕಟ್ಟೆಯಲ್ಲಿ ಸಕ್ಕರೆ ತುಂಬಿಕೊಂಡು ಸಾಗುತ್ತಿದ್ದ ಲಾರಿ ಪಲ್ಟಿ

Views: 260

ಕುಂದಾಪುರ : ಕುಂದಾಪುರ ತಾಲೂಕಿನ ಮುಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಿಗ್ಗೆ ಸಕ್ಕರೆ ತುಂಬಿಕೊಂಡು ಕೇರಳಕ್ಕೆ ತೆರಳುತ್ತಿದ್ದ ಲಾರಿಯೊಂದು ಚಾಲಕ ನಿಯಂತ್ರಣ ತಪ್ಪಿ ಇನ್ನೊಂದು ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಲಾರಿಯು ಸೋಲಾಪುರದಲ್ಲಿ ಸಕ್ಕರೆ ತುಂಬಿಕೊಂಡು ಕೇರಳಕ್ಕೆ ತೆರಳುತ್ತಿತ್ತು. ಮಲ್ಲಿಕಟ್ಟೆ ಜಂಕ್ಷನ್ ನಲ್ಲಿ ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ‌ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡ ಲಾರಿಯು ಇನ್ನೊಂದು ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಚಾಲಕ ಅಪಾಯದಿಂದ ಪಾರಾಗಿದ್ದು, ಹೆದ್ದಾರಿಯಲ್ಲಿ ಸಂಚಾರವು ಕೆಲಹೊತ್ತು ಅಸ್ತವ್ಯಸ್ತಗೊಂಡಿತ್ತು. ಗಂಗೊಳ್ಳಿ ಪೊಲೀಸರು ಹಾಗೂ ಹೆದ್ದಾರಿ ಗಸ್ತು ಸಿಬ್ಬಂದಿ ಸ್ಥಳಕ್ಕೆ ಬಂದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Related Articles

Back to top button
error: Content is protected !!