ಇತರೆ
ಮಣಿಪಾಲ: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Views: 158
ಮಣಿಪಾಲ: ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರನ್ನು ಶ್ರೀನಿಧಿ (20) ಎಂದು ಗುರುತಿಸಲಾಗಿದೆ.
ಹರಂದೂರು ಗ್ರಾಮ, ಕೊಪ್ಪ ತಾಲೂಕು, ಚಿಕ್ಕಮಗಳೂರಿನವರಾಗಿದ್ದು, ಮೃತಳ ತಂದೆ ಡಯಾಲಿಸ್ ಗಾಗಿ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದಕ್ಕೋಸ್ಕರ ಉಡುಪಿ ತಾಲೂಕು ಹೆರ್ಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ತನ್ನ ಹೆಂಡತಿ ಹಾಗೂ ಮಗಳು ಶ್ರೀನಿಧಿಯವರೊಂದಿಗೆ ವಾಸವಿದ್ದರು.
ತಾಯಿ ಉಡುಪಿಗೆ ಸಾಮಾಗ್ರಿಗಳನ್ನು ಖರೀದಿಸಲು ಹೋದಾಗ ತಾನು ವಾಸವಿರುವ ಬಾಡಿಗೆ ಮನೆಯ ರೂಮ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾಳೆ.






