ಇತರೆ

ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Views: 128

ಬೆಂಗಳೂರು, ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಜಾಲಹಳ್ಳಿ ಬಳಿ ನಡೆದಿದ್ದು,ತಡವಾಗಿ ಬೆಳಕಿಗೆ ಬಂದಿದೆ.

ಮೂರು ದಿನಗಳ ಹಿಂದೆ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ದಿಯಾ ಮಂಡೋಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪಶ್ಚಿಮ ಬಂಗಾಳ ಮೂಲದ ದಿಯಾ ಮಂಡೋಲ್ ಮದರ್ ಥೆರೆಸಾ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದಳು. ಕೌಟುಂಬಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಸಹಪಾಠಿಗಳು ರೂಮಿಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಾಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಂಡಿದ್ದಾರೆ.

Related Articles

Back to top button
error: Content is protected !!