ಇತರೆ

ಕಾಲೇಜು ವಿದ್ಯಾರ್ಥಿನಿ ಅಪಘಾತದಲ್ಲಿ ಸಾವು 

Views: 187

ಚಿಕ್ಕಬಳ್ಳಾಪುರ: ಹುಟ್ಟುಹಬ್ಬದ ದಿನವೇ ಅಪಘಾತಕ್ಕೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ.

ಕಾಲೇಜು ವಿದ್ಯಾರ್ಥಿನಿ ರಕ್ಷಿತಾ ಮೃತ ದುರ್ದೈವಿ. ಚಿಕ್ಕಬಳ್ಳಾಪುರ ತಾಲ್ಲೂಕಿನ‌ ಹೊನ್ನೇನಹಳ್ಳಿ ಗ್ರಾಮದವಳಾದ ಈಕೆ ಬೆಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದಳು.

ಹುಟ್ಟುಹಬ್ಬದ ಹಿನ್ನೆಲೆ ನಿನ್ನೆ (ಸೋಮವಾರ) ರಾತ್ರಿ ಕಾರಿನಲ್ಲಿ ಮನೆಗೆ ಬರುತ್ತಿದ್ದಾಗ ಡಿವೈಡರ್‌ಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಯುವತಿ ಮೃತಪಟ್ಟಿದ್ದಾಳೆ. ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಪೋಲಿಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!