ಕ್ರೀಡೆ
ಟೀಂ ಇಂಡಿಯಾ ಕ್ರಿಕೆಟರ್ ಸೂರ್ಯ ಕುಮಾರ್ ದಂಪತಿ ಕಾಪು ಶ್ರೀ ಮಾರಿಗುಡಿ ದೇವಸ್ಥಾನಗೆ ಭೇಟಿ

Views: 234
ಉಡುಪಿ: ಟೀಂ ಇಂಡಿಯಾ ಕ್ರಿಕೆಟರ್ ಸೂರ್ಯ ಕುಮಾರ್ ಯಾದವ್ ಪತ್ನಿ ದೇವಿಶಾ ಶೆಟ್ಟಿ ಜೊತೆಗೆ ಉಡುಪಿಗೆ ಆಗಮಿಸಿದ್ದಾರೆ. ಉಡುಪಿಯ ಕಾಪು ಶ್ರೀ ಮಾರಿಗುಡಿ ದೇವಸ್ಥಾನಗೆ ಭೇಟಿ ನೀಡಿದ್ದು, ದೇವರ ದರ್ಶನ ಪಡೆದಿದ್ದಾರೆ.
ಕರಾವಳಿಯ ಬೇರೆ ಬೇರೆ ದೇವಸ್ಥಾನಗಳಿಗೆ ಹೋಗಿದ್ದೇವೆ ಮನಸ್ಸಿಗೆ ಶಾಂತಿ ಸಿಕ್ಕಿದೆ. ನಾನೊಬ್ಬ ಸಾಮಾನ್ಯ ವ್ಯಕ್ತಿಯಾಗಿ ಬಂದಿದ್ದೇನೆ. ನಾನು ಯಾವುದೇ ಸೆಲೆಬ್ರಿಟಿಯಾಗಿ ಬಂದಿಲ್ಲ. ನಾನೊಬ್ಬ ಸೆಲೆಬ್ರಿಟಿ ಎಂಬ ಆಲೋಚನೆ ನನಗೆ ಬಂದಿಲ್ಲ. ಸಾಮಾನ್ಯ ವ್ಯಕ್ತಿಯಾಗಿ ದೊಡ್ಡ ಜೀವನವನ್ನು ಸಾಗಿಸಬೇಕಾಗಿದೆ. ವರ್ಲ್ಡ್ ಕಪ್ ಅನ್ನೋದು ಇಡೀ ಜೀವನ ಅಲ್ಲ ಅದೊಂದು ಭಾಗ. ಜೀವನದಲ್ಲಿ ಇಂತಹ ಹಲವನ್ನು ನೋಡುತ್ತಾ ಸಾಗಬೇಕಾಗಿದೆ ಎಂದು ಹೇಳಿದ್ದಾರೆ.






