ಕರಾವಳಿ
ಕುಂದಾಪುರ:ಕುಸಿದು ಬಿದ್ದು ವ್ಯಕ್ತಿ ಸಾವು

Views: 215
ಕುಂದಾಪುರ: ಇಲ್ಲಿನ ಪೇಟೆಯೊಳಗಿನ ಪಾರಿಜಾತ ಸರ್ಕಲ್ ಬಳಿ ಸ್ಥಳೀಯ ನಿವಾಸಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.ಸುಬ್ರಹ್ಮಣ್ಯ (47) ಎಂದು ಗುರುತಿಸಲಾಗಿದೆ.
ಕುಸಿದುಬಿದ್ದ ಅವರನ್ನು ಕೂಡಲೇ ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಕೆಎಂಸಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿಂದ ಉಡುಪಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ಜು. 9ರಂದು ಕರೆದೊಯ್ದಾಗ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುದಾಗಿ ತಿಳಿಸಿದ್ದಾರೆ.
ಮೃತರ ಪತ್ನಿ ದೀಪಾ ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






