ಸಾಂಸ್ಕೃತಿಕ

ಬೆದರಿಕೆ,ಸುಲಿಗೆ ಪ್ರಕರಣದಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ನಿರೂಪಕಿ ದಿವ್ಯಾ ವಸಂತ್ ಬಂಧನ

Views: 185

ಬೆಂಗಳೂರು: ಮಸಾಜ್ ಪಾರ್ಲರ್ ಹೆಸರಿನಲ್ಲಿ ಬೆದರಿಕೆ ಹಾಗೂ ಸುಲಿಗೆ ಯತ್ನ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಕನ್ನಡ ಸುದ್ದಿವಾಹಿನಿ ಮಾಜಿ ನಿರೂಪಕಿ, ‘ಗಿಚ್ಚಿ ಗಿಲಿಗಿಲಿ’ ಶೋ ಸ್ಪರ್ಧಿ ದಿವ್ಯಾ ವಸಂತ್  ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮಾಜಿ ನಿರೂಪಕಿ ದಿವ್ಯಾ ವಸಂತ ಇಂದಿರಾನಗರದ ಮಸಾಜ್ ಪಾರ್ಲರ್ ನಲ್ಲಿ ಶ್ರೀಮಂತ ಗ್ರಾಹಕರಿಗೆ ಗಾಳಹಾಕಿ ಬೆದರಿಕೆ ಹಾಗೂ ಸುಲಿಗೆ ಯತ್ನ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿದ್ದರು.

ಈ ಪ್ರಕರಣ ಬಯಲಾಗುತ್ತಲೇ ಆಕೆ ತಲೆಮರೆಸಿಕೊಂಡಿದ್ದರು. ಆಕೆಯ ಬಂಧನಕ್ಕಾಗಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಇದೀಗ ನೆರೆಯ ಕೇರಳದಲ್ಲಿ ಆಕೆಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಪ್ರಕರಣ ದಾಖಲಿಸಿಕೊಂಡಿದ್ದ ಜೀವನ್ ಭೀಮಾನಗರ ಪೊಲೀಸರು ಕಳೆದೊಂದು ವಾರದಿಂದ ದಿವ್ಯಾ ವಸಂತ ಬಂಧನಕ್ಕೆ ಕಾರ್ಯಾಚರಣೆ ನಡೆಸಿದ್ದರು. ಬ್ಲ್ಯಾಕ್‌ಮೇಲ್ ಮಾಡಿ ಹಲವು ಕಡೆ ಹಣ ಸುಲಿಗೆ ಮಾಡಿರುವ ಆರೋಪದ ಬೆನ್ನಲ್ಲೇ ಕಾಣೆಯಾಗಿದ್ದ ದಿವ್ಯಾ ವಸಂತರನ್ನು ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ.

ಮೊದಲು ತಮಿಳುನಾಡಿಗೆ ಪರಾರಿಯಾಗಿದ್ದ ದಿವ್ಯಾ ವಸಂತ ಅಲ್ಲಿಂದ ಕೇರಳಕ್ಕೆ ತೆರಳಿದ್ದರು ಎನ್ನಲಾಗಿದೆ. ಇದೀಗ ಕೇರಳದಿಂದಲೇ ಬಂಧಿಸಿ ಪೊಲೀಸರು ಕರೆತಂದಿದ್ದಾರೆ. ಸದ್ಯ ಇದೀಗ ಕೇಸ್‌ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

 

 

Related Articles

Back to top button
error: Content is protected !!