ಸಾಂಸ್ಕೃತಿಕ

ಸರ್ಕಾರಿ ಗೌರವಗಳೊಂದಿಗೆ ಪಂಚಭೂತಗಳಲ್ಲಿ ಅಪರ್ಣಾ ವಿಲೀನ, ಕನ್ನಡದ ಧ್ವನಿಯೊಂದು ಕಳೆದು ಹೋಗಿದೆ: ಕೋಟ ಶ್ರೀನಿವಾಸ ಪೂಜಾರಿ

Views: 145

ಬೆಂಗಳೂರು: ಶ್ವಾಸಕೋಶ ಕ್ಯಾನ್ಸರ್‌ನಿಂದ ನಿಧನರಾದ ಖ್ಯಾತ ನಿರೂಪಕಿ, ನಟಿ ಅಪರ್ಣಾ ಅವರ ಅಂತ್ಯಸಂಸ್ಕಾರ ಬನಶಂಕರಿ ಚಿತಾಗಾರದಲ್ಲಿ ಸರಿ ಸುಮಾರು 12.30ರ ಹೊತ್ತಿಗೆ ಅಪರ್ಣಾ ಅವರ ಅಂತ್ಯ ಸಂಸ್ಕಾರ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿತು.

ಕುಟುಂಬಸ್ಥರು, ಆಪ್ತರು, ಚಿತ್ರರಂಗದ ಗಣ್ಯರು ಸೇರಿ ನೂರಾರು ಜನರ ಸಮ್ಮುಖದಲ್ಲಿ ಪೊಲೀಸ್‌ ಗೌರವದೊಂದಿಗೆ, ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದ ಪ್ರಕಾರ ಅಂತ್ಯಕ್ರಿಯೆ ನಡೆಯಿತು. ಕೋಟ ಶ್ರೀನಿವಾಸ ಪೂಜಾರಿ ಅಂತಿಮ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಅವರು ಮಾತನಾಡಿ, ಅಪರ್ಣಾ ಅವರು ಮಸಣದ ಹೂ ಚಲನಚಿತ್ರದ ಮೂಲಕ ಸಿನಿಮಾ ಕ್ಷೆತ್ರಕ್ಕೆ ಪಾದಾರ್ಪಣೆ ಮಾಡಿದವರು. ಅವರ ನಿಧನದ ವಿಚಾರವನ್ನು ಕೇಳಿ ತುಂಬಾ ದು:ಖವಾಗುತ್ತಿದೆ  ಎಂದು ವಿಷಾದವನ್ನು ವ್ಯಕ್ತಪಡಿಸಿದರು.

ನಮ್ಮ ಸರ್ಕಾರ ಇದ್ದಾಗ ಮುಖ್ಯಮಂತ್ರಿಗಳು ಭಾಗವಹಿಸುವ ಎಲ್ಲ ಕಾರ್ಯಕ್ರಮಗಳ ನಿರೂಪಣೆಗೆ ಬರುತ್ತಿದ್ದರು. ನಿರೂಪಣೆ, ಸ್ವರಭಾರ, ಕನ್ನಡದ ಧ್ವನಿ ಎಲ್ಲವೂ ಅದ್ಭುತ. ಅಪರ್ಣಾ ಕನ್ನಡದ ಮನೆ ಮಗಳು. ಕರಾವಳಿಯ ಕಂಬಳದ ಬಗ್ಗೆ ನಿರೂಪಣೆ ಮಾಡುವಾಗ ಕಂಬಳದ ಗುರಿಕಾರ ಪ್ರಶಸ್ತಿ ಸ್ವೀಕರಿಸಲು ಬರಬೇಕು ಎಂದು ಹೇಳಿದ್ದರು.

ಕರಾವಳಿಯ ಕಂಬಳದ ಬಗ್ಗೆ ನಿರೂಪಕಿ ಅಪರ್ಣಾ ಅವರಿಗೆ ಕಲ್ಪನೆ ಇರಲಿಲ್ಲ. ಆದರೆ ವಿಚಾರವನ್ನು ತಿಳಿದುಕೊಂಡು ನಿರೂಪಣೆ ಮಾಡುತ್ತಿದ್ದರು. ಯಾವುದೇ ಕಾರ್ಯಕ್ರಮಗಳಿಗೆ ತಮ್ಮ ನಿರೂಪಣೆಯ ಮೂಲಕ ಇಡೀ ಕಾರ್ಯಕ್ರಮಕ್ಕೆ ಮೆರುಗು ನೀಡುತ್ತಿದ್ದರು. ಅಪರ್ಣಾ ನಿಧನದಿಂದ ಕನ್ನಡದ ಧ್ವನಿಯೊಂದು ಕಳೆದು ಹೋಗಿದೆ. ಇಡೀ ಕರ್ನಾಟಕವೇ ದುಃಖದಲ್ಲಿ ಮುಳುಗಿದೆ ಎಂದು ಹೇಳಿದರು.

Related Articles

Back to top button
error: Content is protected !!